ಕೇಂದ್ರ ಬಜೆಟ್: ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಗಿಫ್ಟ್!

ಡಿಜಿಟಲ್ ಕನ್ನಡ ಟೀಮ್:

ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಮೋದಿ ಸರ್ಕಾರ ಮಧ್ಯಮ ವರ್ಗದ ಜನರಿಗೆ ತೆರಿಗೆ ವಿನಾಯಿತಿಯ ನೆಮ್ಮದಿ ನೀಡಿದ್ದು, 5 ಲಕ್ಷ ರೂ. ವರೆಗೂ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದ ಬಜೆಟ್ ನಲ್ಲಿ ರೈತರು, ಮಧ್ಯಮ ವರ್ಗದವರ ಕಡೆ ಹೆಚ್ಚು ಗಮನ ಹರಿಸಿದೆ. ಬಜೆಟ್ ಮಂಡನೆ ಮಾಡಿದ ಕೇಂದ್ರ ಸಚಿವ ಪಿಯೂಶ್ ಗೊಯಲ್, ನೀಡಿದ ಗೋಯಲ್ ಅವರು, ‘5 ಲಕ್ಷ ರೂ ವರೆಗೂ ಆದಾಯ ಹೊಂದಿರುವವರಿಗೆ ಯಾವುದೇ ತೆರಿಗೆ ಇರುವುದಿಲ್ಲ. ಅಂತೆಯೇ ಶೇ.5 ರಷ್ಟು ಇದ್ದ ತೆರಿಗೆಯನ್ನೂ ರದ್ದು ಗೊಳಿಸಲಾಗಿದೆ. ಅಂತೆಯೇ ವಾರ್ಷಿಕ 6.5 ಲಕ್ಷ ರೂ ವಾರ್ಷಿಕ ಆದಾಯ ಹೊಂದಿರುವವರು ಸಣ್ಣ ಉಳಿತಾಯ ಖಾತೆಗಳಲ್ಲಿ ಹೂಡಿಕೆ ಮಾಡಿದರೆ ಇವರಿಗೂ ಸಹ ತೆರಿಗೆ ವಿನಾಯಿತಿ ದೊರೆಯಲಿದೆ’ ಎಂದು ಪ್ರಕಟಿಸಿದರು.
ಇನ್ನು ಹಾಲಿ ಬಜೆಟ್ ನಲ್ಲಿ ಯಾವುದೇ ರೀತಿಯ ಹೊಸ ತೆರಿಗೆ ಘೋಷಣೆ ಮಾಡಿಲ್ಲ. ಆದಾಯ ತೆರಿಗೆ ಮಿತಿಯನ್ನು 2.5 ಲಕ್ಷ ದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. 2.4 ಲಕ್ಷ ರೂ ವರೆಗಿನ ಮನೆ ಬಾಡಿಗೆಗೆ ಮೂಲದಲ್ಲಿ ತೆರಿಗೆ ಕಡಿತ ಇಲ್ಲ. ಸ್ಟಾಂಡರ್ಡ್‌ ಡಿಡಕ್ಷನ್‌ ರೂ. 40 ಸಾವಿರದಿಂದ ರೂ.50 ಸಾವಿರಕ್ಕೆ ಹೆಚ್ಚಳ. ಪಿ.ಎಫ್‌ ಸೇರಿದಂತೆ ಹಲವು ಉಳಿತಾಯಗಳಲ್ಲಿ ಉಳಿಸುವುದು ಸೇರಿದಂತೆ ಒಟ್ಟು ರೂ. 6.5 ಲಕ್ಷ ಆದಾಯದವರೆಗೂ ತೆರಿಗೆ ಬರುವುದಿಲ್ಲ. , ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ, ಶೈಕ್ಷಣಿಕ ಸಾಲ ಪಡೆದುಕೊಂಡಿದ್ದರೆ ತೆರಿಗೆ ವಿನಾಯಿತಿ ನೀಡಲಾಗುತ್ತದೆ. 5ಲಕ್ಷ ರೂಗಳಿಗಿಂತ ಅಧಿಕ 10 ಲಕ್ಷ ರೂಗಳವರೆಗೆ ಶೇ.20%ರಷ್ಟು ತೆರಿಗೆ, 10 ಲಕ್ಷ ರೂಗಳಿಂದ 49 ಲಕ್ಷ ರೂಗಳ ವರೆಗೂ ಶೇ.30ರಷ್ಟು ತೆರಿಗೆ ಮತ್ತು 50 ಲಕ್ಷ ರೂಗಳಿಗೂ ಅಧಿಕ ಆದಾಯ ಹೊಂದಿರುವವರಿಗೆ ಶೇ.30%ರಷ್ಟು ತೆರಿಗೆ ವಿಧಿಸಲಾಗಿದೆ ಎಂದು ಪಿಯೂಶ್ ಗೋಯಲ್ ಹೇಳಿದ್ದಾರೆ.

ಹಿರಿಯ ಉದ್ಯೋಗಿಗಳಿಗೆ ಸಿಹಿ ಸುದ್ದಿ, ತೆರಿಗೆ ರಹಿತ ಗ್ರಾಚ್ಯುಟಿ ಮಿತಿ 30 ಲಕ್ಷ ರೂಗೆ ಏರಿಕೆ ಮಾಡಲಾಗಿದೆ.

ಮುಂದಿನ 2 ವರ್ಷಗಳಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಅಂದಾಜು, ಪರಿಶೀಲನೆ ಪ್ರಕ್ರಿಯೆ ಸಂಪೂರ್ಣವಾಗಿ ಯಂತ್ರಚಾಲಿತವಾಗಿರಲಿದೆ ಎಂದು ಕೇಂದ್ರ ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಇದೇ ವೇಳೆ ಘೊಷಿಸಿದ್ದಾರೆ.

ಎರಡು ವರ್ಷಗಳಲ್ಲಿ ಆದಾಯ ತೆರಿಗೆ ಸಲ್ಲಿಸುವ ಪ್ರಕ್ರಿಯೆಗಳು ಸಂಪೂರ್ಣ ಯಂತ್ರಚಾಲಿತವಾಗಲಿದ್ದು 24 ಗಂಟೆಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

Leave a Reply