ಯೋಧರ ತ್ಯಾಗ ವ್ಯರ್ಥವಾಗಲು ಬಿಡಲ್ಲ: ಮೋದಿ

ಡಿಜಿಟಲ್ ಕನ್ನಡ ಟೀಮ್:

ಕಳೆದ 18 ವರ್ಷಗಳಲ್ಲೇ ಅತಿದೊಡ್ಡ ದಾಳಿಯಾಗಿರುವ ಪುಲ್ವಾಮಾ ದಾಳಿ ಕುರಿತು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ‘ಈ ಯೋಧರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ’ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ದಾಳಿಯ ಕುರಿತು ಟ್ವೀಟ್ ಮಾಡಿರುವ ಮೋದಿ ಹೇಳಿದ್ದಿಷ್ಟು…

‘ಪುಲ್ವಾಮಾದಲ್ಲಿ ಯೋಧರ ಮೇಲಿನ ದಾಳಿ ಕ್ರೂರವಾದುದು. ಈ ಕಠೋರ ದಾಳಿಯನ್ನು ನಾನು ಖಂಡಿಸುತ್ತೇನೆ. ನಮ್ಮ ಯೋಧರ ಈ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಇಡೀ ದೇಶ ನಮ್ಮ ವೀರ ಹುತಾತ್ಮರ ಕುಟುಂಬದ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದೆ. ಗಾಯಾಳು ಯೋಧರು ಆದಷ್ಟು ಬೇಗ ಗುಣಮುಖರಾಗಲಿ. ಈ ದಾಳಿಯ ಕುರಿತು ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ.’

Leave a Reply