ಭಾರತೀಯ ವಾಯುಪಡೆ ದಾಳಿಗೆ 300 ಉಗ್ರರು ಫಿನಿಶ್!?

ಡಿಜಿಟಲ್ ಕನ್ನಡ ಟೀಮ್:

ಪುಲ್ವಾಮಾದಲ್ಲಿ ಜೈಷ್ ಎ ಮೊಹಮ್ಮದ್ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಮಂಗಳವಾರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವೈಮಾನಿಕ ದಾಳಿ ನಡೆಸಿದ್ದು 300ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದೆ ಎಂಬ ವರದಿಗಳು ಬಂದಿವೆ. ಈ ಅಂಕಿ ಅಂಶಗಳ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಮಂಗಳವಾರ ಬೆಳಗಿನ ಜಾವ 3.30ಕ್ಕೆ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ವರದಿಗಳ ಪ್ರಕಾರ ಭಾರತೀಯ ಯುದ್ಧ ವಿಮಾನಗಳು ಕೇವಲ ಜೈಷ್ ಎ ಮೊಹಮದ್ ಉಗ್ರ ಸಂಘಟನೆ ಮಾತ್ರವಲ್ಲದೆ ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್ ಉಗ್ರ ಸಂಘಟನೆ ನೆಲೆಗಳ ಮೇಲೂ ದಾಳಿ ಮಾಡಿವೆ. ಅದರೊಂದಿಗೆ ಗಡಿಭಾಗದಲ್ಲಿ ಭಾರತದ ಮೇಲೆ ದಾಳಿ ಮಾಡಲು ಹೊಂಚು ಹಾಕುತ್ತಿದ್ದ ಕ್ರಿಮಿಗಳನ್ನು ಹೊಸಕಿ ಹಾಕಿದೆ.

ಮಂಗಳವಾರ ದಾಳಿಯ ಕುರಿತು ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೊವಲ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಣೆ ನೀಡಿದ್ದಾರೆ. ಇನ್ನು ಮೋದಿ ನೇತೃತ್ವದಲ್ಲಿ, ತುರ್ತು ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಿದ್ದಾರೆ.

Leave a Reply