ಪಾಪಿಗಳ ವಶಕ್ಕೆ ಸಿಕ್ಕ ಭಾರತೀಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್?

ಡಿಜಿಟಲ್ ಕನ್ನಡ ಟೀಮ್:

ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅಭಿನಂಧನ್ ವರ್ತಮಾನ್ ಪಾಕಿಸ್ತಾನಿಯರ ವಶಕ್ಕೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಬಂದಿವೆ.

ಬುಧವಾರ ಭಾರತೀಯ ವಾಯುಪಡೆಯ ಮಿಗ್ 21 ಯುದ್ಧ ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ವಿಮಾನ ಅಪಘಾತಗೊಂಡಿದ್ದು, ಇಬ್ಬರು ಪೈಲೆಟ್ ಮೃತಪಟ್ಟು ಓರ್ವ ವಿಂಗ್ ಕಮಾಂಡರ್ ನನ್ನು ಪಾಕಿಸ್ತಾನಿಯರು ಬಂಧಿಸಿದ್ದಾರೆ.

ಈ ವಿಚಾರವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘ಇಂದು ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದ್ದು, ಈ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಮಿಗ್ 21 ವಿಮಾನ ಹಾಗೂ ಓರ್ವ ವಿಂಗ್ ಕಮಾಂಡರ್ ನಾಪತ್ತೆಯಾಗಿದ್ದಾರೆ. ಪಾಕಿಸ್ತಾನ ಈ ವಿಂಗ್ ಕಮಾಂಡರ್ ನನ್ನು ವಶಕ್ಕೆ ಪಡೆದಿರುವುದಾಗಿ ಹೇಳಿಕೊಳ್ಳುತ್ತಿದ್ದು, ಇದರ ಸತ್ಯತೆ ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಅತ್ತ ಪಾಕಿಸ್ತಾನ ಅಭಿನಂದನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ವಿಡಿಯೋ ಹಾಗೂ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Leave a Reply