ನಾಳೆ ಕಲಬುರಗಿಗೆ ಪ್ರಧಾನಿ ಮೋದಿ, ಬಿಜೆಪಿ ಸೇರ್ತಾರ ಉಮೇಶ್ ಜಾಧವ್!?

ಡಿಜಿಟಲ್ ಕನ್ನಡ ಟೀಮ್:

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಚಿಂಚೋಳಿ ಶಾಸಕ ಡಾ. ಉಮೇಶ್‌ ಜಾಧವ್‌ ಬುಧವಾರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕಲಬುರಗಿಯ ಎನ್‌ವಿ ಮೈದಾನದಲ್ಲಿ ಬೃಹತ್‌ ಸಾರ್ವಜನಿಕ ಸಮಾರಂಭ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಉಮೇಶ್‌ ಜಾಧವ್‌ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಅಶೋಕ್‌ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದು, ಬುಧವಾರ ಮಧ್ಯಾಹ್ನ 12.15ಕ್ಕೆ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಈ ಮಧ್ಯೆ ಉಮೇಶ್ ಜಾಧವ್ ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದು, ಅವರ ಶಾಸಕ ಸ್ಥಾನ ಅನರ್ಹಗೊಳಿಸಬೇಕು ಎಂಬ ಕಾಂಗ್ರೆಸ್ ಪತ್ರಕ್ಕೆ ಸ್ಪೀಕರ್ ಇನ್ನು ತೀರ್ಮಾನ ತೆಗೆದುಕೊಂಡಿಲ್ಲ. ಈ ಮಧ್ಯೆ ಸೋಮವಾರ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅದನ್ನು ಕೂಡ ಸ್ಪೀಕರ್ ಅಂಗೀಕರಿಸಿಲ್ಲ. ಹೀಗಾಗಿ ಉಮೇಶ್ ಜಾಧವ್ ಅವರು ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

Leave a Reply