ಲೋಕಸಮರದಲ್ಲಿ ದೋಸ್ತಿಗೆ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯ: ಸಿದ್ದು ಭವಿಷ್ಯ

ಡಿಜಿಟಲ್ ಕನ್ನಡ ಟೀಮ್:

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ ಫೈಟ್ ಮಾಡಿಲಿದ್ದು 20ಕ್ಕೂ ಹೆಚ್ಚು ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ಸಮ್ಮಿಶ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆ ವಿಚಾರವಾಗಿ ನಡೆದ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ಬಳಿಕ ಮಾತನಾಡಿದ ಅವರು ಹೇಳಿದಿಷ್ಟು.. ‘ಕ್ಷೇತ್ರ ಹಂಚಿಕೆ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಡ್ಯಾನಿಶ್ ಅಲಿ ಸೇರಿದಂತೆ ಎಲ್ಲರೂ ಸೇರಿ ಚರ್ಚೆ ಮಾಡಿದ್ದೇವೆ. ಸರಿಯಾದ ದಿಕ್ಕಿನಲ್ಲಿಯೇ ಚರ್ಚೆ ನಡೆದಿದ್ದು, ಸುದೀರ್ಘವಾಗಿ ಎಲ್ಲವನ್ನೂ ಯೋಚಿಸುತ್ತೇವೆ. ಜೆಡಿಎಸ್ 12 ಕ್ಷೇತ್ರಗಳನ್ನು ಕೇಳುತ್ತಿದೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಆದರೆ, ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಈಗಾಗಲೇ ಜಾಧವ್ ವಿರುದ್ಧ ಸ್ವೀಕರ್‌ಗೆ ದೂರು ನೀಡಿದ್ದೇನೆ. ಸೂಕ್ತ ದಾಖಲೆಗಳನ್ನು ಸಹ ಒದಗಿಸಿದ್ದೇನೆ.’

Leave a Reply