ಜಮ್ಮುವಿನಲ್ಲಿ ಗ್ರೆನೇಡ್ ದಾಳಿ! 18 ಮಂದಿ ಗಾಯ

ಡಿಜಿಟಲ್ ಕನ್ನಡ ಟೀಮ್:

ಜಮ್ಮುವಿನ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟಗೊಳಿಸಿ, 18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಐಜಿಪಿ ಎಂಕೆ ಸಿನ್ಹಾ, ‘ಬಸ್ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಗ್ರೆನೇಡ್ ಸ್ಫೋಟಗೊಂಡಿರುವುದು ಖಚಿತವಾಗಿದ್ದು 18ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಅವರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಪೊಲೀಸರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿದ್ದು, ಘಟನಾ ಸ್ಥಳವನ್ನು ಸಂಪೂರ್ಣ ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿ ನಂತರ ಓರ್ವ ಉಗ್ರ ಪರಾರಿಯಾಗಿರುವ ಸಾಧ್ಯತೆ ಇದೆ ಎಂಬ ವರದಿ ಬಂದಿವೆ.

Leave a Reply