ಜೆಡಿಎಸ್ ತೆಕ್ಕೆಗೆ 8 ಕ್ಷೇತ್ರ! ಅಂತಿಮವಾಯ್ತು ದೋಸ್ತಿಗಳ ಸೀಟು ಹಂಚಿಕೆ!

ಡಿಜಿಟಲ್ ಕನ್ನಡ ಟೀಮ್:

ಬೆಂಗಳೂರು ಉತ್ತರ ಸೇರಿದಂತೆ ಒಟ್ಟು ಎಂಟು ಕ್ಷೇತ್ರಗಳನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟು ಕೊಟ್ಟು ಸೀಟು ಹಂಚಿಕೆ ಒಪ್ಪಂದ ಕುದುರಿಸಿಕೊಂಡಿದೆ. ಅದರೊಂದಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಮೈಸೂರು ಕ್ಷೇತ್ರವನ್ನು ಬಿಟ್ಟು ಕೊಡದ ಕಾಂಗ್ರೆಸ್ ಅದರ ಬದಲಿಗೆ ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.

ಬೆಂಗಳೂರು ಉತ್ತರ, ಮಂಡ್ಯ, ಹಾಸನ, ತುಮಕೂರು, ವಿಜಯಪುರ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ.

ಇನ್ನು ಸೀಟು ಹಂಚಿಕೆ ಫೈನಲ್ ಆಗುತ್ತಿದ್ದಂತೆ ಮಾಜಿ ಪ್ರಧಾನಿ ದೇವೇಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇದರಿಂದ ಕೇಂದ್ರ ಸಚಿವ ಸದಾನಂದ ಗೌಡ ಅವರಿಗೆ ಈ ಬಾರಿ ಚುನಾವಣೆಯಲ್ಲಿ ತೀವ್ರ ಪ್ರತಿಸ್ಪರ್ಧೆ ಎದುರಾಗಲಿದೆ.

ಹಾಸನದಿಂದ ಪ್ರಜ್ವಲ್ ರೇವಣ್ಣ, ಶಿವಮೊಗ್ಗದಿಂದ ಮಧು ಬಂಗಾರಪ್ಪ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಲಿದೆ.

Leave a Reply