ದೇಶದ ಮೊದಲ ಲೋಕಪಾಲ್ ಆಗಿ ಪಿಸಿ ಘೋಷ್ ನೇಮಕ? ಅಧಿಕೃತ ಘೋಷಣೆ ಬಾಕಿ

ಡಿಜಿಟಲ್ ಕನ್ನಡ ಟೀಮ್:

ಲೋಕಪಾಲ್ ಮಸೂದೆ ಜಾರಿ ಕುರಿತಾಗಿ ಕೇಂದ್ರದ ವಿರುದ್ಧ ಕೇಳಿಬರುತ್ತಿರುವ ಹೊತ್ತಲ್ಲೇ ದೇಶದ ಮೊದಲ ಲೋಕಪಾಲ್ ಆಗಿ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿಸಿ ಘೋಷ್ ಆಯ್ಕೆಯಾಗಲಿದ್ದಾರೆ ಎಂಬ ವರದಿಗಳು ಹೊರಬಿದ್ದಿದೆ.

ಲೋಕಪಾಲ್ ನೇಮಕ ವಿಚಾರವಾಗಿ ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಲೋಕಪಾಲರ ನೇಮಕ ವಿಚಾರ ಗಮನ ಸೆಳೆದಿದೆ.

ಲೋಕಪಾಲ್ ನೇಮಕಕ್ಕೆ ಸುಪ್ರೀಂ ಕೋರ್ಟ್ ನೀಡಿದ್ದ ಅಂತಿಮ ಗಡುವು ಮುಕ್ತಾಯದ ಬೆನ್ನಲ್ಲೇ ಕೇಂದ್ರ ಸರ್ಕಾರ ಲೋಕಾಪಾಲ್ ಆಗಿ ಪಿಸಿ ಘೋಷ್ ಅವರನ್ನು ಆಯ್ಕೆ ಮಾಡಲು ಮುಂದಾಗಿದೆ ಎಂದು ಖಾಸಗಿ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಸಾರವಾಗಿದೆ.

ಪಿಸಿ ಘೋಷ್ ಅವರು ಈ ಹಿಂದೆ ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ್ದರು. ಜಯಲಲಿತಾ ಸೇರಿದಂತೆ ಅವರ ಆಪ್ತೆ ಶಶಿಕಲಾ ಸೇರಿದಂತೆ ನಾಲ್ವರಿಗೆ ಶಿಕ್ಷೆ ವಿಧಿಸಿದ್ದರು.

ಲೋಕಪಾಲ್ ನಲ್ಲಿ ನಿವೃತ್ತ 4 ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ 4 ಐಎಎಸ್ ಅಧಿಕಾರಿಗಳು ಸದಸ್ಯರಾಗಿರಲಿದ್ದಾರೆ.

Leave a Reply