ಪರಿಕ್ಕರ್ ಸ್ಥಿತಿ ಗಂಭೀರ! ಬಿಜೆಪಿ ನೂತನ ಸಿಎಂ ಹುಡುಕಾಟ, ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು

ಡಿಜಿಟಲ್ ಕನ್ನಡ ಟೀಮ್:

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನೂತನ ಸಿಎಂ ಆಯ್ಕೆಗೆ ಬಿಜೆಪಿ ನಾಯಕರ ಚಿಂತನೆ ನಡೆಸಿದ್ದಾರೆ.

ಮನೋಹರ್ ಪರಿಕ್ಕರ್ ಅವರು ಚಿಕಿತ್ಸೆ ಪಡೆಯುತ್ತಿದ್ದು, ಗಂಟೆಯಿಂದ ಗಂಟೆಗೆ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಮನೋಹರ್​ ಪರಿಕ್ಕರ್​ ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಬೆನ್ನಲ್ಲೇ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, ಗೋವಾ ರಾಜಧಾನಿ ಪಣಜಿಯಲ್ಲಿ ಬಿಜೆಪಿ ಮಹತ್ವದ ಸಭೆ ಕರೆದಿದೆ. ಸಭೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಮಾಡಲು ಕೇಂದ್ರ ಬಿಜೆಪಿ ನಾಯಕರು ವೀಕ್ಷಕರನ್ನು ರವಾನೆ ಮಾಡಿದ್ದಾರೆ. ಮೊದಲಿಗೆ ಶಾಸಕರ ಜೊತೆ ಸಮಾಲೋಚನೆ ನಡೆಸಿ ನೂತನ ಸಿಎಂ ಯಾರು ಅನ್ನೋ ನಿರ್ಧಾರ ಪ್ರಕಟ ಮಾಡುವ ಸಾಧ್ಯತೆಯಿದೆ.

ಕಾಂಗ್ರೆಸ್​ ಕೂಡ ಸರ್ಕಾರ ರಚನೆಗೆ ಪ್ರಯತ್ನ ನಡೆಸಿದ್ದು, 40 ಶಾಸಕರ ಬಲಾಬಲದ ಗೋವಾ ವಿಧಾನಸಭೆಯಲ್ಲಿ, ಅತಿದೊಡ್ಡ ಪಕ್ಷವಾಗಿರುವ ಕಾಂಗ್ರೆಸ್‌ಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕೆಂದು ಈಗಾಗಲೇ ರಾಜ್ಯಪಾಲರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಇದೇ ಕಾರಣಕ್ಕೆ ಸರ್ಕಾರ ಉಳಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ಇಂದೇ ನೂತನ ಸಿಎಂ ಆಯ್ಕೆ ಮಾಡುವ ನಿರ್ಧಾರಕ್ಕೆ ಬಂದಿದೆ.

Leave a Reply