ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿಧಿವಶ

ಡಿಜಿಟಲ್ ಕನ್ನಡ ಟೀಮ್:

ಕ್ಯಾನ್ಸರ್ ನಿಂದ ಬಳಲುತ್ತಾ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಭಾನುವಾರ ವಿಧಿವಶರಾಗಿದ್ದಾರೆ.

ಹಲವು ತಿಂಗಳಿನಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದ ಮನೋಹರ್ ಪರಿಕ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ವಿಧಿವಶರಾಗಿದ್ದಾರೆ.

63 ವರ್ಷದ ಪರಿಕ್ಕರ್ ಇತ್ತೀಚೆಗಷ್ಟೇ ದೆಹಲಿಯ ಏಮ್ಸ್ ನಿಂದ ಚಿಕಿತ್ಸೆ ಪಡೆದು ವಾಪಸಾಗಿ ಸರ್ಕಾರ ನಡೆಸಿದ್ದರು. ನಿನ್ನೆ ದಿಢೀರ್ ಸುಸ್ತಾಗಿದ್ದರಿಂದ ಅವರಿಗೆ ಮತ್ತೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಈ ಬಾರಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

 

Leave a Reply