ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಓರ್ವ ಸಾವು

ಡಿಜಿಟಲ್ ಕನ್ನಡ ಟೀಮ್:

ಧಾರವಾಡದ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಓರ್ವ ಮೃತಪಟ್ಟಿದ್ದಾನೆ.

ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಈ ಕಟ್ಟಡ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಗೆ ಸೇರಿದೆ ಎಂಬ ವರದಿಗಳು ಬಂದಿವೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಪಡೆಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

5 ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ 15 ಅಂಗಡಿಗಳಿದ್ದು, 15 ಅಂಗಡಿಗಳು ನೆಲಸಮವಾಗಿದೆ. ಈ ಕಟ್ಟಡ ನಿರ್ಮಾಣಕ್ಕಾಗಿ ಸುಮಾರು 50 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇನ್ನು ನೆಲಮಳಿಗೆಯಲ್ಲಿ ಹೊಟೇಲ್, ಮೆಡಿಕಲ್ ಶಾಪ್ ಇದ್ದು, ಹೆಚ್ಚಿನ ಮಂದಿ ದುರಂತದಲ್ಲಿ ಸಿಲುಕಿರುವ ಆತಂಕ ಎದುರಾಗಿದೆ.

ಜೆಸಿಬಿಯಿಂದ ಕುಸಿದ ಕಟ್ಟಡದ ಮೇಲ್ಛಾವಣಿ ಅವಶೇಷಗಳ ತೆರವು ಕಾರ್ಯ ನಡೆಯುತ್ತಿದೆ. ಇನ್ನು ಗಾಯಾಳುಗಳಿಗೆ ತಕ್ಷಣವೇ ಚಿಕಿತ್ಸೆ ನೀಡಲು ವೈದ್ಯರ ತಂಡ ಆಗಮಿಸಿದ್ದು, 10 ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿವೆ.

Leave a Reply