ವಾರಣಾಸಿಯಲ್ಲಿ ಮೋದಿಗೆ ಕಾಂಗ್ರೆಸ್ ಕೌಂಟರ್ ಪ್ಲಾನ್..!

ಡಿಜಿಟಲ್ ಕನ್ನಡ ಟೀಮ್:

ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೆ ವಾರಣಸಿಯಿಂದ ಆಯ್ಕೆಯಾಗಲು ಬಯಸಿದ್ದು ಇದಕ್ಕೆ ಕಾಂಗ್ರೆಸ್ ಕಡೆಯಿಂದ ಕೌಂಟರ್ ಅಟ್ಯಾಕ್ ಗೆ ಪ್ಲಾನ್ ಹಾಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವಿಟ್ಟರ್‌ನಲ್ಲಿ ಟಾಂಗ್ ಕೊಟ್ಟಿದ್ದು, ಮಾನ್ಯ ನರೇಂದ್ರ ಮೋದಿ ಅವರೇ, ನಿಮಗೆ ನಿಜವಾಗಿಯೂ ಸೈನ್ಯ ಮತ್ತು ಸೈನಿಕರ ಬಗ್ಗೆ ಗೌರವವಿದ್ದರೆ ನಿಮ್ಮ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿರುವ ದೇಶಕ್ಕಾಗಿ ದುಡಿದ ಹೆಮ್ಮೆಯ ಸೈನಿಕ ತೇಜ್ ಬಹದ್ದೂರ್‌ನನ್ನು ಬಹಿರಂಗವಾಗಿ ಬೆಂಬಲಿಸಿ, ಚುನಾವಣೆಯಿಂದ ಹಿಂದೆ ಸರಿಯಿರಿ. ಒಬ್ಬ ಸೈನಿಕ ಆಯ್ಕೆಯಾಗುವುದನ್ನು ನೀವು ಬೆಂಬಲಿಸುವುದಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ..

ಇನ್ನೊಂದೆಡೆ ಪ್ರಿಯಾಂಕಾ ಗಾಂಧಿ ವಾರಣಸಿಯಿಂದ ಸ್ಪರ್ಧೆ ಮಾಡಲು ಪಕ್ಷ ಸೂಚಿಸಿದರೆ ನಾನು ಸ್ಪರ್ಧೆ ಮಾಡಲು ಸಿದ್ಧ ಎಂದಿದ್ರು. ಮೂರು ದಿನಗಳ ಕಾಲ ಗಂಗಾ ಯಾತ್ರೆ ನಡೆಸಿದ್ದ ಪ್ರಿಯಾಂಕಾ ಗಾಂಧಿಗೆ ಸಾಕಷ್ಟು ಜನ ಬೆಂಬಲವೂ ದೊರೆತಿತ್ತು. ಪ್ರಿಯಾಂಕಾ ಗಾಂಧಿ ಅಲ್ಲಿನ ಸ್ಥಳೀಯ ಜನರ ಜೊತೆ ಬೆರೆತು ಸಂವಾದ ನಡೆಸಿದ್ದು, ಸಾಕಷ್ಟು ಸದ್ದು ಮಾಡಿತ್ತು. ಪ್ರಿಯಾಂಕಾ ಗಾಂಧಿ ಅವರಿಗೆ ಇಂದಿರಾ ಗಾಂಧಿ ಅವರ ರೀತಿ ಚಾರ್ಮ್ ಇದ್ದು, ನರೇಂದ್ರ ಮೋದಿ ಅವರನ್ನು ಸೋಲಿಸಲು ಸೂಕ್ತ ಅಭ್ಯರ್ಥಿ ಎಂಬ ಚರ್ಚೆಗಳು ನಡೆದಿವೆ. ಒಂದು ವೇಳೆ ನರೇಂದ್ರ ಮೋದಿ ಎದುರು ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದ್ರೆ ಖಂಡಿತ ಮೋದಿಗೆ ಪ್ರಬಲ ಪೈಪೋಟಿ ಎದುರಾಗಲಿದೆ. ಜತೆಗೆ ಕಾರ್ಯಕರ್ತರ ಉತ್ಸಾಹ ಹೆಚ್ಚಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Leave a Reply