ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ ಫಸ್ಟ್, ಚಿತ್ರದುರ್ಗ ಲಾಸ್ಟ್!

ಡಿಜಿಟಲ್ ಕನ್ನಡ ಟೀಮ್:
2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರದೇ ಮೇಲುಗೈ.
ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ,ಶಿಖಾ ಮತ್ತು ಎಸ್,ಆರ್ ಉಮಾಶಂಕರ್ ಸೋಮವಾರ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಶೇ. 92.20 ಉತ್ತೀರ್ಣ ಪ್ರಮಾಣ ಗಳಿಸಿರುವ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ (ಶೇ.90.91) ದ್ವಿತೀಯ ಸ್ಥಾನದಲ್ಲಿದೆ. ಕೊಡಗು (ಶೇ. 83.31)ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.51.42 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.
ರಾಜ್ಯದ 98 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಹಾಗೂ 80 ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. ಮಾರ್ಚ್‌ 1ರಿಂದ 18ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6.73 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಅದರಲ್ಲಿ ಒಟ್ಟು 4,17,573  ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಶೇ.61.73ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೇ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ ಎಂದು ಕಾರ್ಯದರ್ಶಿ  ಎಸ್,ಆರ್ ಉಮಾಶಂಕರ್ ತಿಳಿಸಿದ್ದಾರೆ, ಫಲಿತಾಂಶವನ್ನು  http://kseeb.kar.nic.in ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ.
ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಶೇ.68.24ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.ಈ ಬಾರಿ ಆಯಾ ಮೌಲ್ಯಮಾಪನ ಕೇಂದ್ರಗಳಿಂದಲೇ ಮೌಲ್ಯಮಾಪಕರು ಆನ್‌ಲೈನ್‌ನಲ್ಲಿ ಅಂಕಗಳನ್ನು ಅಪ್‌ಲೋಡ್‌ ಮಾಡಿದ್ದರಿಂದ ಮೌಲ್ಯಮಾಪನ ಪ್ರಕ್ರಿಯೆ ಬೇಗ ಮುಗಿದಿದೆ. ಇದರಿಂದ ಇಲಾಖೆಯು ಸುಮಾರು 15 ದಿನಗಳ ಮೊದಲೇ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿದೆ.

Leave a Reply