ವಿಶ್ವಕಪ್ ಸಮರಕ್ಕೆ ಕಾಂಗರೂ ಪಡೆ ಪ್ರಕಟ! ಸ್ಮಿತ್, ವಾರ್ನರ್ ವಾಪಸ್!

ಡಿಜಿಟಲ್ ಕನ್ನಡ ಟೀಮ್:

ಮುಂಬರುವ ಜೂನ್ ತಿಂಗಳಲ್ಲಿ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ನಿಷೇಧದ ಶಿಕ್ಷೆಗೆ ಗುರಿಯಾಗಿ ಅಮಾನತುಗೊಂಡಿದ್ದ ಡೇವಿಡ್ ವಾರ್ನರ್ ಹಾಗೂ ಮಾಜಿನಾಯಕ ಸ್ಟೀವನ್ ಸ್ಮಿತ್ ಮತ್ತೆ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ.

ವಾರ್ನರ್ ಹಾಗೂ ಸ್ಮಿತ್ ಅನುಪಸ್ಥಿತಿಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ಟ್ರೇಲಿಯಾ ತಂಡ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದರಲ್ಲಿ ಈ ಇಬ್ಬರು ಆಟಗಾರರ ಅನುಪಸ್ಥಿತಿ ತಂಡಕ್ಕೆ ಕಾಡಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಕಪ್ ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವ ಸಮರದಲ್ಲಿ ಈ ಇಬ್ಬರು ಆಟಗಾರರಿಗೆ ಮತ್ತೆ ಮಣೆ ಹಾಕಲಾಗಿದೆ. ಇನ್ನು ತಂಡ ಮುನ್ನಡೆಸುವ ಜವಾಬ್ದಾರಿಯನ್ನು ಆರಂಭಿಕ ಬ್ಯಾಟ್ಸಮನ್ ಎರಾನ್ ಫಿಂಚ್ ಹೆಗಲಿಗೆ ನೀಡಲಾಗಿದೆ.

ಆಸ್ಟ್ರೇಲಿಯಾ ತಂಡ ಹೀಗಿದೆ…

ಎರಾನ್ ಫಿಂಚ್ (ನಾಯಕ), ಸ್ಟೀವನ್ ಸ್ಮಿತ್, ಡೇವಿಡ್ ವಾರ್ನರ್, ಉಸ್ಮಾನ್ ಖವಾಜ, ಶಾನ್ ಮಾರ್ಷ್, ಗ್ಲೇನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೋನಿಸ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೇ ರಿಚರ್ಡ್ ಸನ್, ನಾಥನ್ ಕೌಲ್ಟರ್ ನೈಲ್, ಜೇಸೆನ್ ಬೆಹಂಡ್ರೂಫ್, ನಾಥನ್ ಲಯಾನ್, ಆ್ಯಡಂ ಜಾಂಪಾ.

Leave a Reply