ಯಡಿಯೂರಪ್ಪನವರಿಗೆ ಜನರ ಸಮಸ್ಯೆಗೆ ಪರಿಹಾರಕ್ಕಿಂತ ರಾಜಕೀಯವೇ ಹೆಚ್ಚಾಯ್ತೇ?

ಡಿಜಿಟಲ್ ಕನ್ನಡ ಟೀಮ್:

ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡ್ತಿಲ ಎಂದು ವಿರೋಧ ಪಕ್ಷ ಬಿಜೆಪಿ ಟೀಕೆ ಮಾಡುತ್ತಿದೆ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದ ಕೆಲಸ ಬಹುಮುಖ್ಯವಾಗಿದ್ದು, ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸುವುದು ವಿರೋಧ ಪಕ್ಷದ ಕೆಲಸ ಕೂಡ ಹೌದು. ಆದ್ರೆ ವಿರೋಧ ಪಕ್ಷದ ನಾಯಕರೇ ಸರ್ಕಾರದ ಕೆಲಸಗಳಿಗೆ ಅಡ್ಡಿಯಾಗುವ ಪರಿಸ್ಥಿತಿ ರಾಜ್ಯ ರಾಜಕಾರಣದ ಚಿತ್ರಣ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿಂದ ಈಗಾಗಲೇ ಅಭಿವೃದ್ಧಿ ಕೆಲಸಗಳು ನೆನಗುದಿಗೆ ಬಿದ್ದಿವೆ. ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಎಲ್ಲಾ ಸಚಿವರು ವಿಶ್ರಾಂತಿ ಮುಗಿಸಿಕೊಂಡು ಸರ್ಕಾರದ ಕೆಲಸಕ್ಕೆ ವಾಪಸ್ ಆಗಿದ್ದಾರೆ. ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ, ಎಲ್ಲಾ ಜಿಲ್ಲಾಧಿಕಾರಿಗ ಜೊತೆ ಸಭೆ ನಡೆಸಿ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸ್ತೇನೆ ಎಂದಿದ್ದಾರೆ. ಆದ್ರೆ ಇದೀಗ ರಾಜ್ಯದ ಅಭಿವೃದ್ಧಿಗೆ ತೊಡಕು ಎದುರಾಗಿದ್ದು, ಈ ತೊಡಕು ಎದುರಾಗಿರೋದು ವಿರೋಧ ಪಕ್ಷದ ನಾಯಕ ಬಿ.ಎಸ್ ಯಡಿಯೂರಪ್ಪ ಅವರಿಂದ.

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳದಂತೆ ಕ್ರಮಕೈಗೊಳ್ಳಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಒಂದು ಬಾರಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದ್ರೆ ಅದರ ನೀತಿ ಸಂಹಿತೆ ಫಲಿತಾಂಶ ಪ್ರಕಟ ಆಗುವ ತನಕ ಜಾಲ್ತಿಯಲ್ಲಿ ಇರುತ್ತೆ ಎಂದು ಗಮನ ಸೆಳೆದಿದ್ದಾರೆ. ಬರ, ಪ್ರಕೃತಿ ವಿಕೋಪ ಸೇರಿದಂತೆ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ರಾಜ್ಯ ಸರ್ಕಾರ ಕಾಮಗಾರಿಗಳನ್ನ ಕೈಗೊಳ್ಳಬಹುದು. ಇದೀಗ ರಾಜ್ಯದಲ್ಲಿ ಚುನಾವಣೆ ಮುಕ್ತಾಯವಾಗ್ತಿದ್ದ ಹಾಗೆ ಚುನಾವಣಾ ಆಯೋಗ ಅನುಮತಿ ನೀಡಿದೆ ಎಂದು ಅಭಿವೃದ್ಧಿ ಕೆಲಸ ಮಾಡಲು ಸರ್ಕಾರ ಮುಂದಾಗಿದೆ. ಚುನಾವಣಾ ಆಯೋಗ ಅಭಿವೃದ್ಧಿ ಕಾಮಗಾರಿಗಳನ್ನ ಕೈಗೊಳ್ಳಲು ನೀಡಿರುವ ಅನುಮತಿಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜಕೀಯ ಕಾರಣಕ್ಕೆ ಟೀಕೆ ಮಾಡಿದ ಇದೇ ಬಿಜೆಪಿ ನಾಯಕರು, ಇದೀಗ ರಾಜ್ಯದಲ್ಲಿ ಚುನಾವಣೆ ಮುಕ್ತಾಯವಾಗಿದ್ದರೂ ಅಭಿವೃದ್ಧಿ ಕಡಿಮೆ ಕೆಲಸಕ್ಕೆ ಅಡ್ಡಗಾಲು ಹಾಕ್ತಿರೋದರ ಬಗ್ಗೆ ಭಾರೀ ಟೀಕೆಗಳು ಕೇಳಿ ಬರುತ್ತಿವೆ.

Leave a Reply