ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಹಾಸನಕ್ಕೆ ನಂ.1 ಸ್ಥಾನ!

ಡಿಜಿಟಲ್ ಕನ್ನಡ ಟೀಮ್:

2018-19ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಹಾಸನ ಪ್ರಥಮ ಸ್ಥಾನ ಗಳಿಸಿದ್ದರೆ, ರಾಮನಗರ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಎಸ್​ಎಸ್​​ಎಲ್​ಸಿ ಬೋರ್ಡ್​​ ನಿರ್ದೇಶಕಿ ವಿ. ಸುಮಂಗಲಾ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಿದ್ದಾರೆ. ಪರೀಕ್ಷೆ ಬರೆದಿರುವ 8,41,666 ವಿದ್ಯಾರ್ಥಿಗಳು ಫಲಿತಾಂಶ ನೋಡಲು ಅಧಿಕೃತ ಎಸ್​ಎಸ್​​ಎಲ್​ಸಿ ಬೋರ್ಡ್​​​​ ವೆಬ್​ಸೈಟ್​ karresults.nic.in ಗೆ ಭೇಟಿ ನೀಡಬೇಕು.

ಕಳೆದ ಬಾರಿಯಂತೆ ಈ ಬಾರಿಯೂ ಯಾದಗಿರಿ ಕಡೆ ಸ್ಥಾನದಲ್ಲಿದೆ. ಕಳೆದ ಸಾಲಿನಲ್ಲಿ ಹಾಸನ ಏಳನೇ ಸ್ಥಾನ ಪಡೆದಿದ್ದರೆ, ರಾಮನಗರ 17ನೇ ಸ್ಥಾನದಲ್ಲಿತ್ತು. ಕಳೆದ ಬಾರಿ ಪ್ರಥಮ ಸ್ಥಾನ ಪಡೆದಿದ್ದ ಉಡುಪಿ ಈ ಬಾರಿ ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಇದೇ ಮೊದಲ ಬಾರಿಗೆ ಹಾಸನ ಜಿಲ್ಲೆ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದ್ದು, ರಾಮನಗರ ಎರಡನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಕಾಯ್ದುಕೊಂಡಿದೆ. ಕುಮಟಾದ ನಾಗಾಂಜಲಿಗೆ 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ತಿಳಿಸಿದ್ದಾರೆ.

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇ. 73.70 ಫಲಿತಾಂಶ ಲಭ್ಯವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ. 1.8 ಹೆಚ್ಚಿನ ಫಲಿತಾಂಶ ಬಂದಿದೆ. ಈ ವರ್ಷವೂ ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಫಲಿತಾಂಶ ಪಡೆದಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಫಲಿತಾಂಶ ಶೇ. 1.8ರಷ್ಟು ಹೆಚ್ಚಳಗೊಂಡಿದ್ದು, ಶೇ.73.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಇನ್ನು ಶೇ 27.30 ರಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

Leave a Reply