ವಿದಾಯ ಪತ್ರದಲ್ಲಿ ಅಣ್ಣಾಮಲೈ ಮನದಾಳದ ಮಾತು!

ಡಿಜಿಟಲ್ ಕನ್ನಡ ಟೀಮ್:

ಅತ್ಯಂತ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿ ಎಂದೇ ಹೆಸರು ಸಂಪಾದಿಸಿರುವ ಅಣ್ಣಾಮಲೈ ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ವಿದಾಯ ಪತ್ರ ಬರೆದಿದ್ದು, ಆದರ ಸಾರಾಂಶ ಹೀಗಿದೆ..

ಎಲ್ಲಾ ನನ್ನ ಪ್ರೀತಿಯ ಸ್ನೇಹಿತರು ಮತ್ತು ಶ್ರೇಯೋಭಿಲಾಷಿಗಳಿಗೆ…

ಎಲ್ಲರಿಗೂ ನನ್ನ ಶುಭಾಷಯಗಳು. ಕಳೆದ 2 ದಿನಗಳಿಂದಲೂ ನನ್ನ ರಾಜೀನಾಮೆ ಕುರಿತಾಗಿ ಎಲ್ಲೆಡೆ ಸುದ್ದಿ ಹರಿದಾಡ್ತಿದೆ. ಅದರ ಬಗ್ಗೆ ನಾನೊಂದು ಕ್ಲ್ಯಾರಿಟಿ ಕೊಡಲು ಬಯಸುತ್ತೇನೆ. ಈ ದಿನ ಅಂದರೆ 28ನೇ ಮೇ 2019 ನಾನು ಭಾರತೀಯ ಪೊಲೀಸ್ ಸೇವೆಗೆ ನನ್ನ ರಾಜೀನಾಮೆ ನೀಡಿದ್ದೇನೆ. ಅಂಗೀಕಾರ, ಪತ್ರ ವ್ಯವಹಾರ ಎಲ್ಲಾ ಪ್ರಕ್ರಿಯೆಗಳಿಗೂ ಕೆಲ ಕಾಲ ಸಮಯ ತೆಗೆದುಕೊಳ್ಳುತ್ತದೆ. ಕಳೆದ 6 ತಿಂಗಳಿನಿಂದಲೂ ನಾನು ಈ ಆಲೋಚನೆಯಲ್ಲಿದ್ದೆ. ಐಪಿಎಸ್ಗೆ ಆಯ್ಕೆಯಾಗಿ 9 ವರ್ಷಗಳೇ ಆಯ್ತು. ನಾನು ಆ 9 ವರ್ಷಗಳ ಪ್ರತಿಯೊಂದು ಕ್ಷಣದಲ್ಲೂ ಖಾಕಿ ಜೊತೆಯಲ್ಲೇ ಬದುಕಿದೆ. ಪೊಲೀಸ್ ಕೆಲಸಕ್ಕಿಂತ ಸರಿ ಸಮನಾದ ಮತ್ತೊಂದು ಕೆಲಸ ಇಲ್ಲ ಎಂದು ನಂಬಿದವನು ನಾನು. ಇದನ್ನ ನನ್ನ ಎಷ್ಟೋ ಮಂದಿ ಜೊತೆಗಾರರೊಂದಿಗೂ ಹಂಚಿಕೊಂಡಿದ್ದೇನೆ. ನನ್ನ ಪ್ರಕಾರ ಪೊಲೀಸ್ ಕೆಲಸ ದೇವರಿಗೆ ಬಹಳ ಹತ್ತಿರವಾದ ಕೆಲಸ. ಜೊತೆಗೆ ಹೆಚ್ಚು ಜವಾಬ್ಧಾರಿಯುತ ಕೆಲಸ. ಈ ಕೆಲಸದಲ್ಲಿ ನಾನು ಸಾಕಷ್ಟು ಜನರ ಪ್ರೀತಿ ಗಳಿಸಿದ್ದೇನೆ. ಅಂತೆಯೇ ಸಾಕಷ್ಟು ವಯುಕ್ತಿಕ ಸಭೆ, ಸಮಾರಂಭ, ಕುಟುಂಬದ ಕೆಲಸ ಕಾರ್ಯಗಳನ್ನೂ ಕಳೆದುಕೊಂಡಿದ್ದೇನೆ. ನಾನು ಇವತ್ತು ಈ ಮಟ್ಟಕ್ಕೆ ಬೆಳೆಯೋಕೆ ಸಹಕರಿಸಿದ ಹಲವರಿಗೆ ನಾನು ಏನೂ ಮಾಡಲು ಸಾಧ್ಯವಾಗಲಿಲ್ಲ. ಇದು ನನ್ನನ್ನ ಆಗ್ಗಾಗ್ಗೆ ಚಿಂತನೆಗೆ ಈಡು ಮಾಡಿದ್ದು ಸುಳ್ಳಲ್ಲ..

ಕಳೆದ ವರ್ಷ ನಾನು ಮಾನಸ ಸರೋವರದ ಕೈಲಾಸ ಯಾತ್ರೆಯಲ್ಲಿ ಪಾಲ್ಗೊಂಡಿದ್ದೆ. ಆ ಯಾತ್ರೆ ನನ್ನ ಕಣ್ಣು ತೆರೆಸಿತು. ನನ್ನ ಮುಂದಿನ ಜೀವನದ ಬಗ್ಗೆ ಮಾರ್ಗದರ್ಶನ ಸಿಕ್ಕಿತು. ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಸಾವು ನನ್ನನ್ನ ತೀವ್ರವಾಗಿ ಭಾಧಿಸಿತು. ಅಲ್ಲದೆ ಬದುಕಿನ ಮತ್ತೊಂದು ಆಯಾಮಕ್ಕೆ ಹೊರಳಲು, ನನ್ನ ಬದುಕನ್ನ ನಾನೇ ಓದಿಕೊಳ್ಳಲು ವೇದಿಕೆ ಸೃಷ್ಟಿಸಿತು. ಬದುಕಿನ ಎಲ್ಲಾ ಮಜಲುಗಳಿಗೂ ಒಂದು ಕೊನೆ ಇದ್ದೇ ಇದೆ. ನನ್ನ ಖಾಕಿ ಬದುಕಿನ ಕೆಲಸ ಮುಗಿದಿದೆ. ಹಾಗಂತ ನಾನು ನಿರ್ಧರಿಸಿದ್ದೇನೆ. ನಾನು ಲೋಕಸಭಾ ಚುನಾವಣೆಗೆ ಮೊದಲೇ ಈ ಬಗ್ಗೆ ನಿರ್ಧರಿಸಿದ್ದೆ. ಆದರೆ ಚುನಾವಣಾ ಸಮಯದಲ್ಲಿ ರಾಜೀನಾಮೆ ಕೊಟ್ಟು ಕರ್ತವ್ಯದಿಂದ ಹಿಂದೆ ಸರಿಯಲು ಮನಸ್ಸು ಒಪ್ಪಲಿಲ್ಲ. ನನ್ನ ವೃತ್ತಿ ಜೀವನದಲ್ಲಿ ಯಾರಿಗಾದ್ರೂ ಯಾವುದಾದ್ರೂ ತೊಂದರೆ ಅಥವಾ ಮನಃಸ್ತಾಪಗಳಿದ್ದರೆ ಅಂಥವರ ಬಳಿ ಕ್ಷಮೆ ಕೇಳುತ್ತೇನೆ.

ಜನ ಎಲ್ಲಾ ಮುಂದೇನು ಅಂತ ಕೇಳ್ತಿದ್ದಾರೆ. ನಾನು ಅಷ್ಟು ದೊಡ್ಡ ಯಾವುದೋ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿಲ್ಲ. ನನಗೆ ಸ್ವಲ್ಪ ಸಮಯದ ಅವಕಾಶವಿದೆ. ನನ್ನ ಜೀವನದ ಅತಿ ಚಿಕ್ಕ ಚಿಕ್ಕ ಘಟನೆಗಳು, ಚಿಕ್ಕ ಚಿಕ್ಕ ವಿಷಯಗಳನ್ನ ಸವಿಯಲು ನನಗೆ ಸಮಯ ಬೇಕಿದೆ. ನನ್ನ ಮಗನೊಟ್ಟಿಗೆ ಸಮಯ ಕಳೆಯಬೇಕಿದೆ. ಅವನ ಪ್ರತಿಯೊಂದು ಬೆಳವಣಿಗೆಗೂ ತಂದೆಯಾಗಿ ನಾನು ಸಮಯ ಕೊಡಬೇಕಿದೆ. ನಾನು ನನ್ನ ಕುಟುಂಬದತ್ತ ಹೊರಳಬೇಕಿದೆ. ಜೀವನ ಇನ್ನೂ ತುಂಬಾ ಇದೆ.

ವೃತ್ತಿ ಭಾಂಧವರನ್ನ ನಾನು ತುಂಬಾನೇ ಮಿಸ್ ಮಾಡ್ಕೊಂಡಿದ್ದೀನಿ. ಜೊತೆಗೆ ನನ್ನನ್ನ ಇಷ್ಟಪಟ್ಟ ಜನರನ್ನ ಕೂಡ. ಪ್ರಮುಖವಾಗಿ ಕಾರ್ಕಳ, ಉಡುಪಿ, ಚಿಕ್ಕಮಗಳೂರು ಮತ್ತು ಬೆಂಗಳೂರಿನ ಪ್ರಮುಖರನ್ನ. ನಾನು ನಿಮ್ಮೆಲ್ಲರ ಪ್ರೀತಿ ಮತ್ತು ನನ್ನ ಹಿರಿಯ ಅಧಿಕಾರಿಗಳ ಮಾರ್ಗದರ್ಶನಗಳನ್ನ ಮಿಸ್ ಮಾಡ್ಕೊತಿದೀನಿ. ನನ್ನೆಲ್ಲಾ ಕಾನ್ಸ್ಟೆಬಲ್ಗಳು, ಕಿರಿಯ ದರ್ಜೆಯ ಅಧಿಕಾರಿಗಳ ಶ್ರೇಯೋಭಿವೃದ್ಧಿಗೆ ನಾನು ಸಾಕಷ್ಟು ದುಡಿದಿದ್ದೇನೆ ಎಂಬ ಆತ್ಮತೃಪ್ತಿ ಇದೆ. ಅವರ ವೃತ್ತಿ ಬದುಕು ಮತ್ತು ದೈನಂದಿನ ಜೀವನ ಇನ್ನೂ ಹೆಚ್ಚಿನ ಅವಶ್ಯಕವಾಗಿ ಬೆಳಗಬೇಕಿದೆ. ನನ್ನಿಂದ ಯಾರಿಗಾದ್ರೂ ಯಾವುದೇ ಸಮಯದಲ್ಲಾದರೂ ಮನಸ್ಸಿಗೆ ನೋವುಂಟಾಗಿದ್ದರೆ ನನ್ನನ್ನು ಕ್ಷಮಿಸಿ.

ನಿಮ್ಮೆಲ್ಲರನ್ನೂ ಮುಖ್ಯವಾಗಿ ನಿಮ್ಮ ಪ್ರೀತಿ- ವಿಶ್ವಾಸಗಳನ್ನು ನಾನು ಖಂಡಿತವಾಗಿಯೂ ಮಿಸ್ ಮಾಡ್ಕೋತಿದ್ದೀನಿ.

ತುಂಬು ಪ್ರೀತಿಯಿಂದ

ಕೆ. ಅಣ್ಣಾಮಲೈ.

1 COMMENT

  1. pity to note wrong signals by presss and multi media now>> why to relay such matters without any confirmation is QUESTION NOW>> NOT GOD TO BEP OTHERS BED CHEMBER ASLSO.. SO TO SAY.. ONCE UPON A TIME ONE NOVEL DRAGGED WELKNOWN KANNADAITER OF DHARWAD WAS FACED THE COURT CASE KINDLY BE NOTED ..,” TIME , PLACWE AND ACTIONS ARE IMPORTANT BEFORE MAKINING OF news items i FEEL.., evidentially WHO,WHERE, WHAT, WHEN AND HOW TO BE CLEAR WITH WRITTEN STAEMENTS BEFORE PRINT OR BRAOAD COST LSI I FEEL. , MULTI-MEDIA MAY BE VERY ALERTIVE BEFORE MAKINK NEWS I FEEL. THANKS. sub matter ?to follow> THANKS.

Leave a Reply