ಮೋದಿ ಪ್ರಮಾಣಕ್ಕೆ ಇವರು ಹೋಗೋದಿಲ್ಲ..! ಯಾಕೆ ಗೊತ್ತಾ..?

ಡಿಜಿಟಲ್ ಕನ್ನಡ ಟೀಮ್:

ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರುತ್ತಿರುವ ನರೇಂದ್ರ ಮೋದಿ ಇಂದು ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ದೇಶ ವಿದೇಶದ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ. ಆದ್ರೆ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಈ ನಾಯಕರು ಮಾತ್ರ ಹೋಗ್ತಿಲ್ಲ.

ಹೌದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೂ ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಹೋಗಿತ್ತು. ಆದ್ರೆ ಮಮತಾ ಬ್ಯಾನರ್ಜಿ, ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಆರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗುವುದಾಗಿ ಹೇಳಿದ್ದ ಮಮತಾ ಚುನಾವಣೆ ವೇಳೆ ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಟುಂಬಸ್ಥರಿಗೆ ಆಹ್ವಾನ ಕೊಟ್ಟಿದ್ದಾರೆ ಅನ್ನೋದು ಗೊತ್ತಾದ ಮೇಲೆ ಈ ನಿರ್ಧಾರ ಪ್ರಕಟಿಸಿದ್ದಾರೆ. ಜೊತೆಗೆ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಜಕೀಯಕರಣ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೂ ಪ್ರಧಾನಿ ಕಾರ್ಯಾಲಯದಿಂದ ಪ್ರಮಾಣ ವಚನದ ಆಹ್ವಾನ ಪತ್ರಿಕೆ ಬಂದಿದೆ. ಆದ್ರೆ ಚಂದ್ರಬಾಬು ನಾಯ್ಡು ದೆಹಲಿಗೆ ಹೋಗುವ ಬಗ್ಗೆ ಇನ್ನೂ ಕೂಡ ಯಾವುದೇ ನಿರ್ಧಾರ ಪ್ರಕಟ ಮಾಡಿಲ್ಲ. ಆದ್ರೆ ತೆಲಗು ದೇಶಂ ಪಾರ್ಟಿ ನಾಯಕರು ಮಾತ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು ಅನ್ನೋ ಹಕ್ಕೊತ್ತಾಯ ಮಾಡಿದ್ದಾರೆ. ಹೀಗಾಗಿ ಭಾಗಿಯಾಗ್ತಾರಾ ಇಲ್ವಾ ಅನ್ನೋ ಬಗ್ಗೆ ಇನ್ನೂ ಕೂಡ ಗೊತ್ತಾಗಿಲ್ಲ..

ಕೊನೆಯದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬರ್ತಿಲ್ಲ. ಯಾಕೆ ಬರುತ್ತಿಲ್ಲ ಅನ್ನೋ ಪ್ರಶ್ನೆಗೆ ಉತ್ತರ ಏನಂದ್ರೆ ಭಾರತ ಆಹ್ವಾನವನ್ನೇ ಕಳುಹಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್​ಡಿಎ ಮೈತ್ರಿಕೂಟ ಭರ್ಜರಿ ಜಯ ದಾಖಲಿಸುತ್ತಿದ್ದ ಹಾಗೆ ಪಾಕ್​ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ತಿಳಿಸಿದ್ರು. ಅದಕ್ಕೆ ಮೋದಿ ಧನ್ಯವಾದ ಕೂಡ ಹೇಳಿದ್ರು. ಆದ್ರೆ ಪುಲ್ವಾಮ ದಾಳಿ ಬಳಿಕ ಭಾರತ ಏರ್​ಸ್ಟ್ರೈಕ್​ ನಡೆಸಿತ್ತು. ಭಾರತ ಚುನಾವಣೆಗಾಗಿಯೇ ಏರ್​ಸ್ಟ್ರೈಕ್​ ಮಾಡಿದೆ. ಯಾವುದೇ ಹಾನಿಯಾಗದಿದ್ದರೂ ಸಾವು ನೋವು ಸಂಭವಿಸಿದೆ ಎಂದು ಹೇಳುತ್ತಿದೆ ಎಂದು ಇಮ್ರಾನ್​ ಖಾನ್​ ಆರೋಪ ಮಾಡಿದ್ರು. ಇದೀಗ ಗೆದ್ದ ಬಳಿಕ ಪ್ರಮಾಣ ಸ್ವೀಕಾರಕ್ಕೆ ಆಹ್ವಾನ ಕೊಡುವುದು ಸರಿಯಲ್ಲ ಅನ್ನೋ ಕಾರಣಕ್ಕೆ ಆಹ್ವಾನ ಕೊಟ್ಟಿಲ್ಲ ಎನ್ನಲಾಗಿದೆ.

Leave a Reply