ಉ.ಪ್ರ ಮಹಾಮೈತ್ರಿಗೆ ಎಳ್ಳು ನೀರು! ಉಪ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಮಾಯಾವತಿ ನಿರ್ಧಾರ

ಡಿಜಿಟಲ್ ಕನ್ನಡ ಟೀಮ್:

ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಕಟ್ಟಿಹಾಕಬೇಕು ಎಂಬ ಉದ್ದೇಶದೊಂದಿಗೆ ಮಹಾಮೈತ್ರಿ ಮಾಡಿಕೊಂಡಿದ್ದ ಎಸ್ಪಿ ಹಾಗೂ ಬಿಎಸ್ಪಿ ಹಿನ್ನಡೆ ಅನುಭವಿಸಿದ ಪರಿಣಾಮ ಮುಂಬರುವ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಫರ್ಧಿಸಲು ಬಿಎಸ್ಪಿ ನಿರ್ಧರಿಸಿದೆ.

ಶೀಘ್ರದಲ್ಲೇ ಉತ್ತರ ಪ್ರದೇಶದ 11 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಈ ಚುನಾವಣೆಯನ್ನು ಏಕಾಂಗಿಯಾಗಿ ಸ್ಪರ್ಧಿಸಲು ಪಕ್ಷದ ನಾಯಕಿ ಮಾಯಾವತಿ ನಿರ್ಧರಿಸಿದ್ದಾರೆ.

ಸೋಮವಾರ ನಡೆದ ಪಕ್ಷದ ಸಭೆಯಲ್ಲಿ ಸಮಾಜವಾದಿ ಪಕ್ಷದ ಜತೆಗಿನ ಮೈತ್ರಿ ಕುರಿತು ಮಾಯಾವತಿ ತೀವ್ರ ಅತೃಪ್ತಿ ಹೊರಹಾಕಿದ್ದು, ಎಸ್ಪಿ ನಾಯಕ ಅಖಿಲೇಶ್ ಯಾದವ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ಪಕ್ಷದ ಕಾರ್ಯಕರ್ತರು ಘಟಬಂಧನವನ್ನು ಅವಲಂಬಿಸದೆ ಪಕ್ಷದ ಸಂಘಟನೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

Leave a Reply