ಕೆಪಿಸಿಸಿ ವಿಸರ್ಜನೆ ಮಾಡಿದ ಎಐಸಿಸಿ!

ಡಿಜಿಟಲ್ ಕನ್ನಡ ಟೀಮ್:

ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಕರ್ನಾಟಕ ಕಾಂಗ್ರೆಸ್​ ಪ್ರದೇಶ ಸಮಿತಿ (ಕೆಪಿಸಿಸಿ)ಯಲ್ಲಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷ ಸ್ಥಾನಗಳನ್ನು ಹೊರತುಪಡಿಸಿ ಉಳಿದ ಪದಾಧಿಕಾರಿಗಳನ್ನು ಬದಲಾಯಿಸಲು ನಿರ್ಧರಿಸಿದೆ. ಹೀಗಾಗಿ ಸದ್ಯ ಕೆಪಿಸಿಸಿಯನ್ನು ವಿಸರ್ಜನೆ ಮಾಡಿದ್ದು ಹೊಸ ಪದಾಧಿಕಾರಿಗಳ ಆಯ್ಕೆ ಮಾಡಲಾಗುವುದು.

ಈ ಸಂಬಂಧ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್​ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ‘ಕೆಪಿಸಿಸಿ ಸಮಿತಿ ವಿಸರ್ಜಿಸಿ, ಹೊಸ ಪದಾಧಿಕಾರಿಗಳ ನೇಮಕ ಮಾಡಲಾಗುವುದು. ಈ ಬದಲಾವಣೆಯಲ್ಲಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಹೊರತುಪಡಿಸಲಾಗಿದೆ’ ಎಂದು ತಿಳಿಸಿದ್ದಾರೆ

Leave a Reply