ಬಂಡಾಯ ಶಾಸಕರ ರಾಜೀನಾಮೆ! ದೋಸ್ತಿ ಸರ್ಕಾರ ಪತನಕ್ಕೆ ಕ್ಷಣಗಣನೆ?

ಡಿಜಿಟಲ್ ಕನ್ನಡ ಟೀಮ್:

ಕಳೆದ ಒಂದು ವರ್ಷದಿಂದ ಹಲವು ಆತಂಕಗಳನ್ನು ಎದುರಿಸಿದ್ದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಈಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ 13 ಬಂಡಾಯ ಶಾಸಕರು ರಾಜೀನಾಮೆ ನೀಡಿದ್ದಾರೆ.

ಇಷ್ಟು ದಿನಗಳ ಕಾಲ ರಾಜೀನಾಮೆ ವಿಚಾರವಾಗಿ ಅನೇಕ ಊಹಾಪೋಹಗಳು ಕೇಳಿಬಂದಿತ್ತು. ಆದರೆ ಶನಿವಾರದ ರಾಜಕೀಯ ಬೆಳವಣಿಗೆಗಳು ಮೈತ್ರಿ ಸರ್ಕಾರ ಪತನದ ಸೂಚನೆಯನ್ನು ಖಚಿತಪಡಿಸಿದ್ದಾರೆ.

ಇಂದು ಅತೃಪ್ತರ ಜತೆ ಇನ್ನು ಕೆಲವು ಪಕ್ಷನಿಷ್ಠೆಯ ಶಾಸಕರು ಕಾಣಿಸಿಕೊಂಡಿದ್ದು, ಕಾಂಗ್ರೆಸ್ ಜೆಡಿಎಸ್ ನಾಯಕರಿಗೆ ದೊಡ್ಡ ಶಾಕ್ ಎದುರಾಗಿದೆ. ಕಾಂಗ್ರೆಸ್ ನ ರಾಮಲಿಂಗಾ ರೆಡ್ಡಿ, ಸೌಮ್ಯ ರೆಡ್ಡಿ, ಮುನಿರತ್ನ, ಜೆಡಿಎಸ್ ನ ಎಚ್.ವಿಶ್ವನಾಥ್, ಗೋಪಾಲಸ್ವಾಮಿ ಅವರ ರಾಜೀನಾಮೆ ದೋಸ್ತಿಗಳಿಗೆ ಆಘಾತ ನೀಡಿದೆ.

ಈ ಎಲ್ಲ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮೈತ್ರಿ ಸರ್ಕಾರ ಇಕ್ಕಟ್ಟಿಗೆ ಸಿಲುಕಲಿದೆ. 12ರಂದು ಅಧಿವೇಶನ ಆರಂಭವಾಗುವುದರೊಳಗೆ ರಾಜೀನಾಮೆ ನೀಡಲು 13 ಶಾಸಕರು ಮುಂದಾಗಿದ್ದಾರೆ. ಗಮನಿಸಬೇಕಾದ ಅಂಶವೆಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಬಹುತೇಕರು ಸಮನ್ವಯ ಸಮಿತಿ ಅಧ್ಯಕ್ಷ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗರು.

ಯಾರೆಲ್ಲಾ ರಾಜೀನಾಮೆ:

ರಾಮಲಿಂಗಾರೆಡ್ಡಿ(ಬಿಟಿಎಂ ಲೇಔಟ್), ಸೌಮ್ಯರೆಡ್ಡಿ (ಜಯನಗರ), ಮಹೇಶ್ ಕುಮಟಳ್ಳಿ(ಅಥಣಿ), ಬಿ.ಸಿ.ಪಾಟೀಲ್(ಹಿರೇಕೆರೂರು), ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ರಮೇಶ್ ಜಾರಕಿಹೊಳಿ(ಗೋಕಾಕ್), ಎಸ್.ಟಿ.ಸೋಮಶೇಖರ್(ಯಶವಂತಪುರ), ಎಚ್.ವಿಶ್ವನಾಥ್(ಹುಣಸೂರು), ನಾರಾಯಣಗೌಡ(ಕೆ.ಆರ್.ಪೇಟೆ), ಶಿವರಾಮ್ ಹೆಬ್ಬಾರ್(ಯಲ್ಲಪುರ), ಸುಬ್ಬಾರೆಡ್ಡಿ (ಬಾಗೇಪಲ್ಲಿ), ರೋಷನ್ ಬೇಗ್( ಶಿವಾಜಿನಗರ), ನಾಗೇಂದ್ರ(ಬಳ್ಳಾರಿ ಗ್ರಾಮಾಂತರ) ಅವರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply