ರಾಜೀನಾಮೆ ನೀಡಿರುವ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ

ಡಿಜಿಟಲ್ ಕನ್ನಡ ಟೀಮ್:

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತರ ಪೈಕಿ 5 ಮಂದಿ ಕಾಂಗ್ರೆಸ್ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

‘ಬಿಜೆಪಿಯವರು ಅಧಿಕಾರದ ಆಸೆಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಹಣ ಹಾಗೂ ಇತರೆ ಅಧಿಕಾರದ ಆಸೆ ತೋರಿಸಿ ಸೆಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ನಾನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯಾವ ಶಾಸಕರೂ ಪಕ್ಷ ಬಿಡದಂತೆ ಸೂಚನೆ ನೀಡಿದ್ದೆ. ಆದರೂ ಕೆಲವರು ಹೋಗಿದ್ದಾರೆ. ಅವರ ಮನವೊಲಿಸುವ ಕರೆತರುವ ಪ್ರಯತ್ನ ನಡೆದಿದೆ. ನನಗೆ ಅತ್ಯಾಪ್ತರು ಎಂಬುದೇನಿಲ್ಲ. ಕಾಂಗ್ರೆಸ್ ನ ಎಲ್ಲಾ ಶಾಸಕರು ನನಗೆ ಆತ್ಮೀಯರೇ. ಅದೇ ರೀತಿ ಬಿಜೆಪಿಯಲ್ಲೂ ನನಗೆ ಆತ್ಮೀಯರಿದ್ದಾರೆ. ಈಗಾಗಲೇ ಮುಂಬೈನಲ್ಲಿರುವ ಶಾಸಕರ ಜೊತೆ ಮಾತುಕತೆ ನಡೆಸಿದ್ದೇನೆ. ನಮ್ಮ ಪ್ರಯತ್ನವನ್ನು ನಾವು ಮುಂದುವರೆಸಿದ್ದೇವೆ. ಶೀಘ್ರವೇ ಎಲ್ಲವೂ ಒಂದು ಹಂತಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply