ಸದ್ಯಕ್ಕೆ ನಿಲ್ಲುತ್ತಿಲ್ಲ ರಾಜೀನಾಮೆ ಪರ್ವ! ಮತ್ತಿಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ!

ಡಿಜಿಟಲ್ ಕನ್ನಡ ಟೀಮ್:

ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಎಷ್ಟೇ ಪ್ರಯತ್ನಿಸಿದರೂ ಒಬ್ಬರಾದ ಮೇಲೆ ಒಬ್ಬರಂತೆ ಶಾಸಕರು ರಾಜೀನಾಮೆ ನೀಡುತ್ತಲೇ ಇದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಬಹುಮತ ಸಂಪೂರ್ಣ ಕುಸಿದಿದೆ.

ಬುಧವಾರ ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಸುಧಾಕರ್ ಹಾಗೂ ವಸತಿ ಸಚಿವ ಎಂಟಿಬಿ ನಾಗರಾಜ್ ಅವರು ಸ್ಪೀಕರ್ ಕಚೇರಿಗೆ ಭೇಟಿ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿ ರಾಜಭವನದತ್ತ ಹೋಗುತ್ತಿದ್ದ ಸುಧಾಕರ್ ಅವರನ್ನು ತಡೆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಮನವೊಲಿಸುವ ಪ್ರಯತ್ನ ಮಾಡಿದರು.

ಈ ವೇಳೆ ನಿನಗೆ ಒಳ್ಳೆಯದಾಗುತ್ತೆ, ಮುಂದಿನ ದಿನಗಳಲ್ಲಿ ಮಂತ್ರಿ ಆಗ್ತಿಯ ಎಂದು ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ಇಷ್ಟು ದಿನ ನೋಡಿ ನನಗೆ ಸಾಕಾಗಿದೆ. ನನ್ನನ್ನು ಬಿಟ್ಟುಬಿಡಿ ಎಂದು ಕೇಳಿಕೊಂಡಿದ್ದಾರೆ.

ಇನ್ನು ಚಿಂಚೋಳಿ ಶಾಸಕ ಪ್ರಕಾಶ್ ಹುಕ್ಕೇರಿ ಕೂಡ ಸ್ಪೀಕರ್ ಕಚೇರಿಗೆ ಭೇಟಿ ನೀಡಿದ್ದು, ರಾಜೀನಾಮೆ ಹಾಗೂ ವಿಪ್ ಜಾರಿ ಕುರಿತ ಅನುಮಾನ ಬಗೆಹರಿಸಿಕೊಂಡಿದ್ದಾರೆ.

ಇಷ್ಟೆಲ್ಲಾ ಬೆಳವಣಿಗೆಗಳ ನಡುವೆ ಅಂಜಲಿ ನಿಂಬಾಳ್ಕರ್ ವಿಧಾನಸೌಧಕ್ಕೆ ಆಗಮಿಸಿದ್ದು ಕುತೂಹಲ ಮೂಡಿಸಿದೆ.

Leave a Reply