ಮೈತ್ರಿ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದ ಸುಪ್ರೀಂ ತೀರ್ಪು..!

ಡಿಜಿಟಲ್ ಕನ್ನಡ ಟೀಮ್:

ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ರಾಜೀನಾಮೆ ನೀಡಿರುವ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಈ ತೀರ್ಪಿನಲ್ಲಿ ಅತೃಪ್ತ ಶಾಸಕರ ಪರವಾಗಿಯೇ ಇದೆ ಅನ್ನುವ ಅಂಶಗಳು ಮೇಲ್ನೋಟಕ್ಕೆ ಕಾಣಿಸಿದ್ದು, ಸರ್ಕಾರ ಉಳಿಯುವ ಸಾಧ್ಯತೆಗಳು ಕಡಿಮೆ ಆಗಿದೆ.

15 ಶಾಸಕರ ರಾಜೀನಾಮೆ ಅಂಗೀಕಾರ ವಿಷಯದಲ್ಲಿ ನಾವು ಮಧ್ಯಂತರ ಆದೇಶ ಮಾಡುವುದಿಲ್ಲ. ರಾಜೀನಾಮೆ ವಿಚಾರದಲ್ಲಿ ಸ್ಪೀಕರ್ ಇಷ್ಟದಂತೆ ಇತ್ಯರ್ಥ ಪಡಿಸಬಹುದು. ಆದರೆ ಒಂದು ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು.ಕಾಲ ಮಿತಿಯನ್ನೂ ಇಂತಿಷ್ಟೇ ಎಂದು ನಾವು ಹೇಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದೆ.

ಸ್ಪೀಕರ್ ನಿರ್ಧಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎನ್ನುತ್ತಲೇ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ. ಈಗಾಗಲೇ ರಾಜೀನಾಮೆ ನೀಡಿರುವ ಶಾಸಕರನ್ನು ಅಧಿವೇಶನದಲ್ಲಿ ಭಾಗವಹಿಸಲು ಒತ್ತಾಯ ಮಾಡುವಂತಿಲ್ಲ ಎನ್ನುವ ಮೂಲಕ ವಿಪ್ ಕೊಟ್ಟು ಸದನಕ್ಕೆ ಹಾಜರಾಗುವಂತೆ ಮಾಡುವ ತಂತ್ರಗಾರಿಕೆಯನ್ನು ನ್ಯಾಯಾಲಯ ತಡೆದಿದೆ. ಸಂವಿಧಾನದ ಆರ್ಟಿಕಲ್ 190ರ ಅಡಿಯಲ್ಲಿ ರಾಜೀನಾಮೆ ಪ್ರಕ್ರಿಯೆ ಇತ್ಯರ್ಥ ಮಾಡಬೇಕು ಎಂದು ಸೂಚಿಸಿದೆ. ಶಾಸಕರ ಮೇಲೆ ಒತ್ತಡ ಹೇರಬಾರದು ಎನ್ನುವ ಮೂಲಕ ಬಂಡಾಯ ಶಾಸಕರಿಗೆ ಬಿಗ್ ರಿಲೀಫ್ ನೀಡಿದ್ದು ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದೆ.

Leave a Reply