ವಿಶ್ವಾಸ ಪರೀಕ್ಷೆ ಗೆದ್ದ ಬಿಎಸ್ ವೈ ಸರ್ಕಾರ!

ಡಿಜಿಟಲ್ ಕನ್ನಡ ಟೀಮ್:

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಶ್ವಾಸಮತ ಯಾಚನೆ ಮಾಡಿ ಗೆಲುವು ಸಾಧಿಸಿದ್ದು, ಸರ್ಕಾರವನ್ನು ಭದ್ರಪಡಿಸಿಕೊಂಡಿದ್ದಾರೆ. ಇದೇ ವೇಳೆ ಹಣಕಾಸು ವಿಧೇಯಕ ಮಸೂದೆಯನ್ನು ಮಂಡನೆ ಮಾಡಿ ಸದನದಲ್ಲಿ ಅಂಗೀಕಾರವಾಗಿದೆ.

ಸ್ಪೀಕರ್ ರಮೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ವಿಶೇಷ ಸದನದಲ್ಲಿ ಸಿಎಂ ಯಡಿಯೂರಪ್ಪನವರು ವಿಶ್ವಾಸಮತ ಯಾಚನೆ ಮಾಡಿದರು. ಈ ವಿಚಾರವಾಗಿ ಬಿ.ಎಸ್ ಯಡಿಯೂರಪ್ಪ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಚರ್ಚೆ ಮಾಡಿದರು. ನಂತರ ಸ್ಪೀಕರ್ ಧ್ವನಿಮತ ಹಾಕಿದರು. ಇದರಲ್ಲಿ ಯಡಿಯೂರಪ್ಪನವರು ಬಹುಮತ ಪಡೆದರು. ಬಹುಮತ ಸಾಬೀತಿನ ನಂತರ ಹಣಕಾಸು ವಿಧೇಯಕವನ್ನು ಮಂಡನೆ ಮಾಡಿ ಅದನ್ನು ಕೂಡ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಈ ಚರ್ಚೆ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ‘ನಾನು ಯಾವುದೇ ಕಾರಣಕ್ಕೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಜನಪರ ಆಡಳಿತ ನಮ್ಮ ಗುರಿ ವಿರೋಧ ಪಕ್ಷಗಳನ್ನು ಗಣನೆಗೆ ತೆಗೆದುಕೊಂಡು ಹೋಗುತ್ತೇನೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಮುಂದಿನ ದಿನಗಳಲ್ಲಿ ಆಡಳಿತ ತ್ರ ಸರಿದಾರಿಗೆ ತರುವುದು ನಮ್ಮ ಗುರಿ. ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ನಿಭಾಯಿಸಲು ಸರ್ಕಾರ ಕೆಲಸ ಮಾಡಲಿದೆ. ರೈತರಿಗೆ ಅನುಕೂಲವಾಗಲು ಕೇಂದ್ರ ಸರ್ಕಾರ ವಾರ್ಷಿಕ 6 ಸಾವಿರ ಹಣ ನೀಡುವಂತೆ ರಾಜ್ಯ ಸರ್ಕಾರ ರೈತರಿಗೆ 4 ಸಾವಿರ ರೂ. ಅನ್ನು ಎರಡು ಕಂತುಗಳಲ್ಲಿ ನೀಡಲಾಗುವುದು’ ಎಂದರು.

Leave a Reply