ಜಮ್ಮು ಕಾಶ್ಮೀರದ 35a, 370 ವಿಶೇಷ ಸ್ಥಾನಮಾನ ರದ್ದು! ಮೋದಿ-ಶಾ ಐತಿಹಾಸಿಕ ನಿರ್ಧಾರ!

ಡಿಜಿಟಲ್ ಕನ್ನಡ ಟೀಮ್:

ಇಷ್ಟು ದಿನಗಳ ಕಾಲ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನಬದ್ಧವಾಗಿ ನೀಡಲಾದ 35ಎ ಮತ್ತು 370ರ ವಿಶೇಷ ಸ್ಥಾನ ಮಾನ ಮತ್ತು ವಿಶೇಷ ಅಧಿಕಾರವನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಸಂಪುಟ ಇಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದೆ.

ಸೋಮವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯಸಭೆಯಲ್ಲಿಂದು ಈ ನಿರ್ಧಾರವನ್ನು ಪ್ರಕಟಿಸಿ ಮಸೂದೆಯನ್ನು ಮಂಡಿಸಿದರು.

370 ಮತ್ತು 35ಎ ವಿಧಿ ರದ್ದುಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸುವ ಮೂಲಕ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಿಷನ್ ಕಾಶ್ಮೀರ ಮೂಲಕ ಕ್ರಾಂತಿಗಿಂತ ಚಾಣಾಕ್ಷ ನಡೆ ಅನುಸರಿಸುವ ಮೂಲಕ ಕಣಿವೆ ರಾಜ್ಯದಲ್ಲಿನ ಪ್ರತ್ಯೇಕತೆ ಕೂಗು, ಭಯೋತ್ಪಾದಕರ ದಾಳಿ, ಯೋಧರು ಮತ್ತು ನಾಗರಿಕರ ಸಂಘರ್ಷ ಮತ್ತು ಅಶಾಂತಿಯನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಪ್ರತಿಭಟನೆ ನಡುವೆ ಈ ಮಸೂದೆ ಮಂಡಿಸಲಾಗಿದೆ. 370 ಮತ್ತು 35ಎ ವಿಧಿಗಳನ್ನು ರದ್ದುಗೊಳಿಸುವ ಚಾರಿತ್ರಿಕ ಕ್ರಮಕ್ಕೆ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಪರ ಮತ್ತು ವಿರೋಧಿ ಅಭಿಪ್ರಾಯಗಳು ವ್ಯಕ್ತವಾಗಿದೆ.

ಜಮ್ಮು ಕಾಶ್ಮೀರವನ್ನು  ವಿಧಾನಸಭೆ ಇರುವ ಕೇಂದ್ರಾಡಳಿತ ಪ್ರದೇಶ ಹಾಗೂ ಲಡಾಕ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

Leave a Reply