ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬಿಎಸ್ ವೈ! ಚರ್ಚಿಸಿದ್ದಾದ್ರು ಏನು?

ಡಿಜಿಟಲ್ ಕನ್ನಡ ಟೀಮ್:

ಸಚಿವ ಸಂಪುಟ ರಚನೆ ಕುರಿತು ನಿನ್ನೆ ಸಂಜೆ ದೆಹಲಿಗೆ ಹಾರಿದ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಉತ್ತರ ಕರ್ನಾಟಕದಲ್ಲಿನ ನೆರೆ ಹಾಗೂ ನೀರಾವರಿ ಯೋಜನೆಗಳ ಕುರಿತು ಚರ್ಚೆಸಿದ್ದಾರೆ.

ಇಂದಿನ ಭೇಟಿ ವೇಳೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2ರ ವರದಿ ಹಾಗೂ ಮಹಾದಾಯಿ ಜಲ ವಿವಾದ ನ್ಯಾಯಾಧಿಕರಣದ ವರದಿಗಳನ್ನು ಗಜೆಟ್ ಅಧಿಸೂಚನೆ ಹೊರಡಿಸುವಂತೆ ಮತ್ತು ಮೇಕೆದಾಟು ಕುಡಿಯುವ ನೀರು ಕಂ ಬ್ಯಾಲೆನ್ಸಿಂಗ್ ರಿಸರ್ವಯರ್ ಯೋಜನೆಯ ಡಿಪಿಆರ್ ಅನುಮೋದಿಸುವಂತೆ ಮನವಿ ಮಾಡಿದರು.

ಜೊತೆಗೆ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ, ಆರ್ಥಿಕ ನೆರವು ನೀಡುವಂತೆಯೂ ಮನವಿ ಮಾಡಿದರು. ಇದಲ್ಲದೆ, ಹುಬ್ಬಳ್ಳಿ-ಧಾರವಾಡದಲ್ಲಿ ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ ಸ್ಥಾಪಿಸುವಂತೆ ಕೋರಿದರು.

ಇದಕ್ಕೂ ಮುನ್ನ ಯಡಿಯೂರಪ್ಪ ಅವರು ಇಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ವಿವಿಧ ಯೋಜನೆಗಳ ಕುರಿತು ಚರ್ಚಿಸಿದರು. ಜತೆಗೆ ನವದೆಹಲಿಯಲ್ಲಿ ಕರ್ನಾಟಕ ಭವನದ ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

Leave a Reply