ದರ್ಶನ್ ಹಲ್ಲೆ ಮಾಡಿಲ್ಲ; ಪತ್ನಿ ವಿಜಯಲಕ್ಷ್ಮಿ ಸ್ಪಷ್ಟನೆ

ಡಿಜಿಟಲ್ ಕನ್ನಡ ಟೀಮ್:

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಸುದ್ದಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಹರಿದಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದು ಕೇವಲ ವದಂತಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಸದ್ಯ ದರ್ಶನ್ ಅವರ 50ನೇ ಚಿತ್ರ ಕುರುಕ್ಷೇತ್ರ ತೆರೆಗೆ ಬಂದಿರುವ ಬೆನ್ನಲ್ಲೇ ಶನಿವಾರ ದರ್ಶನ್ ಅವರು ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಗಾಳಿಸುದ್ದಿ ಹಬ್ಬಿತ್ತು. ಆದ್ರೀಗ ಸ್ವತಃ ವಿಜಯಲಕ್ಷ್ಮಿ ಈ ಬಗ್ಗೆ ಟ್ವೀಟ್ ಮಾಡಿ ವದಂತಿಗೆ ತೆರೆ ಎಳೆದಿದ್ದಾರೆ.

Leave a Reply