5 ಸಾವಿರ ಕೋಟಿ ತುರ್ತು ಪರಿಹಾರ ಬಿಡುಗಡೆಗೆ ಮನವಿ ಮಾಡಿ ಮೋದಿಗೆ ಗೌಡರ ಪತ್ರ

ಡಿಜಿಟಲ್ ಕನ್ನಡ ಟೀಮ್:

ರಾಜ್ಯದಲ್ಲಿ ಎದುರಾಗಿರುವ ಭೀಕರ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಗೆ ಸುಮಾರು 2 ಕೋಟಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದ ಮೂರನೇ ಒಂದು ಭಾಗದ ಜನರು ಎರಡು ವಾರಗಳಿಂದ ಸಂಕಷ್ಟದಲ್ಲಿ ಬದುಕುತ್ತಿದ್ದಾರೆ. ಪ್ರವಾಹದಿಂದ ರಸ್ತೆ ಸಂಪರ್ಕ ಕಡಿದಿದೆ, ಬೆಳೆಗಳಿಗೆ ಹಾನಿಯಾಗಿದೆ. ಮನೆಗಳು ಕುಸಿದಿದ್ದ, ಅರಣ್ಯ ನಾಶವಾಗಿದೆ. ಅನೇಕ ಮಂದಿ ಬಲಿಯಾಗಿದ್ದಾರೆ. ರಾಜ್ಯದ 10 ನದಿಗಳು ಉಕ್ಕಿ ಹರಿಯುತ್ತಿದ್ದು, 15 ಆಣೆಕಟ್ಟುಗಳಿಂದ ನೀರು ಬಿಡಲಾಗಿದೆ. ಇದರಿಂದ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳು ಭಾರಿ ಪ್ರಮಾಣದಲ್ಲಿ ಹಾನಿಯಾಗಿವೆ. ಹೀಗಾಗಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ತುರ್ತಾಗಿ 5 ಸಾವಿರ ಕೋಟಿ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Leave a Reply