10 ಸಾವಿರ ಕೋಟಿ ತುರ್ತು ಪರಿಹಾರ ಕೊಡಿ! ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಮನವಿ

ಡಿಜಿಟಲ್ ಕನ್ನಡ ಟೀಮ್:

ಅಬ್ಬರದ ಪ್ರವಾಹಕ್ಕೆ ತತ್ತರಿಸಿರುವ ಕರ್ನಾಟಕದ 17 ಜಿಲ್ಲೆಗಳಲ್ಲಿ ಸುಮಾರು 50 ಸಾವಿರ ಕೋಟಿಗೂ ಹೆಚ್ಚಿನ ಪ್ರಮಾಣದ ಆಸ್ತಿಪಾಸ್ತಿ ನ್ಟವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿಯನ್ನು ತುರ್ತು ಪರಿಹಾರವಾಗಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಂಗಳವಾರ ಶಿವಮೊಗ್ಗ ಪ್ರವಾಸ ಮಾಡಿರುವ ಸಿಎಂ, ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಪರಿಸ್ಥಿತಿ ತುಬಾ ಹದಗೆಟ್ಟಿದೆ. ಕೇಂದ್ರ ಗೃಹ ಸಚಿವ ಅಮಿತ್ ಸಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜ್ಯದಲ್ಲಿ ಪ್ರವಾಹದಿಂದ ಸುಮಾರು 50 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ. ಆಗಸ್ಟ್ 16ರಂದು ನಾನು ದೆಹಲಿಗೆ ಭೇಟಿ ಮಾಡಿ ಪ್ರಧಾನಿ ಅವರೊಂದಿಗೆ ಈ ವಿಚಾರವಾಗಿ ಮಾತುಕತೆ ನಡೆಸುತ್ತೇನೆ ಎಂದರು.

ಇಂದು ಶಿವಮೊಗ್ಗದ ಶಾಸಕರುಗಳನ್ನು ಭೇಟಿ ಮಾಡಿ ಪರಿಸ್ಥಿತಿ ಬಗ್ಗೆ ಚರ್ಚಿಸುತ್ತೇನೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ತಕ್ಷಣವೇ 10 ಸಾವಿರ ಕೋಟಿ ಹಣವನ್ನು ತುರ್ತು ಪರಿಹಾರವಾಗಿ ಬಿಡುಗಡೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದರು.

Leave a Reply