ಪ್ರಧಾನಿ ಮೋದಿ ಭೇಟಿಯಾದ ಬಿಎಸ್ ವೈ ಅಂಡ್ ಟೀಮ್! ಪ್ರವಾಹ ಪರಿಹಾರಕ್ಕೆ ಮನವಿ

ಡಿಜಿಟಲ್ ಕನ್ನಡ ಟೀಮ್:

ಸಚಿವ ಸಂಪುಟ ರಚನೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಪರಿಹಾರ ನೀಡುವ ಉದ್ದೇಶದೊಂದಿಗೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅಂಡ್ ಟೀಮ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತನಾಡಿದರು.

ರಾಜ್ಯದ 17 ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿರುವ ಕಾರಣ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ಹೆಚ್ಚಿನ ಪ್ರಮಾಣದ ಪರಿಹಾರ ಬಿಡುಗಡೆ ಮಾಡುವಂತೆ ಶುಕ್ರವಾರ ಮನವಿ ಸಲ್ಲಿಸಿದರು.

ಯಡಿಯೂರಪ್ಪನವರ ಜತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ರಾಜ್ಯ ನಾಯಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್ ಕೂಡ ಇದ್ದರು.

Leave a Reply