ಚೇತರಿಕೆ ಕಾಣದ ಜೇಟ್ಲಿ ಆರೋಗ್ಯ; ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರ ಭೇಟಿ

ಡಿಜಿಟಲ್ ಕನ್ನಡ ಟೀಮ್:

ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣದೇ ಗಂಭೀರವಾಗಿದ್ದು, ಅವರನ್ನು ಕೃತಕ ಉಸಿರಾಟದಲ್ಲೇ ಇರಿಸಲಾಗಿದೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ಜಿತೇಂದ್ರ ಸಿಂಗ್, ಸಂಸದ ಗೌತಮ್ ಗಂಭೀರ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಆಗಸ್ಟ್ 9ರಂದು ಉಸಿರಾಟದ ತೊಂದರೆ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ಜೇಟ್ಲಿ (66) ಅವರನ್ನು ದಾಖಲಿಸಲಾಗಿತ್ತು. ಜೇಟ್ಲಿ ಅವರ ಆರೋಗ್ಯದ ಬಗ್ಗೆ ಕಳೆದ ಒಂದು ವಾರದಿಂದ ಆಸ್ಪತ್ರೆಯಿಂದ ಯಾವುದೇ ಅಧಿಕೃತ ಹೇಳಿಕೆ ಪ್ರಕಟವಾಗಿಲ್ಲ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ವರದಿಗಳು ಬಂದಿದ್ದು, ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡುತ್ತಲೇ ಇದ್ದಾರೆ.

Leave a Reply