ಡಿಕೆಶಿಗೆ ಬಿಗ್ ರಿಲೀಫ್! ಐಟಿ ದಾಳಿ ಪ್ರಕರಣ ವಿಚಾರಣೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್!

ಡಿಜಿಟಲ್ ಕನ್ನಡ ಟೀಮ್:

ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.

ದೆಹಲಿ ಫ್ಲಾಟ್‌ಗಳ ಮೇಲೆ ನಡೆದ ಐಟಿ ದಾಳಿಯ ಪ್ರಕರಣ ಕುರಿತಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ಕೋರಿ ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ತಡೆಯಾಜ್ಞೆ ನೀಡಿದೆ.

ಐಟಿ ದಾಳಿ ಪ್ರಕರಣದಿಂದ ಕೈಬಿಡುವಂತೆ ಕೋರಿ ಡಿಕೆಶಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ನ್ಯಾಯಾಲಯ ಅರ್ಜಿ ವಜಾ ಮಾಡಿತ್ತು. ಈ ಆದೇಶ ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಡಿಕೆಶಿ ಪರ ವಾದಿಸಿದ ವಕೀಲರು ವಾದ ಮಂಡಿಸಿದರು. ಇದನ್ನು ಆಲಿಸಿದ ನ್ಯಾಯಪೀಠ ಮಧ್ಯಂತರ ತಡೆ ನೀಡಿದೆ.

Leave a Reply