ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ವಿಧಿವಶ!

ಡಿಜಿಟಲ್ ಕನ್ನಡ ಟೀಮ್:

ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಜೇಟ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೇಟ್ಲಿ ಅವರ ಆರೋಗ್ಯ ವಿಚಾರಿಸಲು ಬಿಜೆಪಿ ಸೇರಿದಂತೆ ಇತರೆ ವಿರೋಧ ಪಕ್ಷಗಳ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದರು.

ದೇಶ ಕಂಡ ಅತ್ಯುತ್ತಮ ಹಣಕಾಸು ಮಂತ್ರಿಗಳಲ್ಲಿ ಒಬ್ಬರಾದ ಜೇಟ್ಲಿ ಅವರು ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ, ವಿತ್ತ ಸಚಿವರಾಗಿ ನೊಟ್ಯಾಂತರ, ಜಿಎಸ್ ಟಿ ಯಂತಹ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದರು.

ಜೇಟ್ಲಿ ಅವರ ಅಗಲಿಕೆಗೆ ದೇಶವೇ ಕಂಬನಿ ಮಿಡಿದಿದೆ.

Leave a Reply