ಜಂತಕಲ್ ಮೈನಿಂಗ್ ಕೇಸ್; ಕುಮಾರಸ್ವಾಮಿಗೆ ಸಿಕ್ತು ಬಿಗ್ ರಿಲೀಫ್!

ಡಿಜಿಟಲ್ ಕನ್ನಡ ಟೀಮ್:

ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ಎಚ್​ಡಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಡಲಾಗಿದ್ದು, ಅದರೊಂದಿಗೆ ಮಾಜಿ ಮುಖ್ಯಮಂತ್ರಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದು, ಎಚ್​ಡಿಕೆ ಹೆಸರನ್ನು ಕೈ ಬಿಟ್ಟಿದೆ.

ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಶಾಮೀಲಾಗಿದ್ದಾರೆ ಎನ್ನುವ ಆರೋಪದ ಮೇಲೆ ಅವರ ವಿರುದ್ಧ ಐಪಿಸಿ ಸೆಕ್ಷನ್ 420, 465,467,468, 471 ಹಾಗೂ 120 (ಬಿ) ಮತ್ತು ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ ಈಗ ಸೂಕ್ತ ಸಾಕ್ಷ್ಯ ಸಿಗದ ಕಾರಣ ಪ್ರಕರಣದಿಂದ ಮಾಜಿ ಸಿಎಂ ಕುಮಾರಸ್ವಾಮಿ ಹೆಸರನ್ನು ಎಸ್​ಐಟಿ ಕೈ ಬಿಟ್ಟಿದೆ.

2007ರಲ್ಲಿ ಎಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ವಿನೋದ್ ಗೋಯಲ್ ಮಾಲೀಕತ್ವದ ಜಂತಕಲ್ ಮೈನಿಂಗ್ ಎಂಟರ್ ಪ್ರೈಸಸ್ ಸಂಸ್ಥೆಗ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೀರೆಕಂದವಾಡಿ ಮತ್ತು ತನಿಗೇಹಳ್ಳಿಯಲ್ಲಿ ಅದಿರು ಸಾಗಿಸಲು ಅನುಮತಿ ನೀಡಿದ್ದರು. ಅಕ್ರಮವಾಗಿ ಪಾಕ್​ಗೆ ಅದಿರು ಸಾಗಣೆಯಾಗಿದ್ದು, ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು.

ಹಿಂದೆ ಕಂಪನಿ ಸಂಗ್ರಹಿಸಿದ್ದ ಅದಿರು ಸಾಗಣೆಕೆಯ ಲೈಸೆನ್ಸ್ ನವೀಕರಣಕ್ಕೆ ಎಚ್​ಡಿಕೆ ಸಹಾಯ ಮಾಡಿದ್ದರು. 1.17 ಲಕ್ಷ ಮೆಟ್ರಿಲ್ ಟನ್ ಅದಿರು ಸಾಗಾಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಒತ್ತಡ ಹಾಕಿದ್ದರು ಎಂದು ಗಂಗಾರಾಂ ಬಡೇರಿಯಾ ಆರೋಪಿಸಿದ್ದರು. ಆದರೆ ಬಡೇರಿಯಾ ಆರೋಪಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೈ ಬಿಡಲಾಗಿದೆ.

Leave a Reply