ಡಿಕೆ ಶಿವಕುಮಾರ್ ಅರ್ಜಿ ವಜಾ ಮಾಡಿದ ಹೈಕೋರ್ಟ್!

ಡಿಜಿಟಲ್ ಕನ್ನಡ ಟೀಮ್:

ದೆಹಲಿ ನಿವಾಸದ ಮೇಲೆ ತೆರಿಗೆ ಇಲಾಖೆ ದಾಳಿ ವೇಳೆ ಸಿಕ್ಕ ಹಣದ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದು ಕೋರಿ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆ ಮೂಲಕ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನ ವಿಚಾರಣೆ ಮುಂದುವರಿಸಬಹುದು ಎಂದು ಕೋರ್ಟ್ ತಿಳಿಸಿದೆ.

2017ರ ಆಗಸ್ಟ್ 2ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ ದಾಖಲೆ ಇಲ್ಲದ 8.59 ಕೋಟಿ ರುಪಾಯಿಯನ್ನು ಪತ್ತೆ ಮಾಡಿತ್ತು. ಜತೆಗೆ ಹವಾಲಾ ಮೂಲಕ ಏಜೆಂಟ್ ಗಳ ಸಹಾಯದಿಂದ ಸಾವಿರಾರು ಕೋಟಿ ರೂಗಳನ್ನು ಬದಲಾಯಿಸಿದ್ದಾರೆ. ಕಪ್ಪು ಹಣವನ್ನು ಬಿಳಿಯಾಗಿ ಪರಿವರ್ತನೆ, ವಿದೇಶದಲ್ಲಿ ಹಣವನ್ನು ಹೂಡಿಕೆ ಆರೋಪಗಳನ್ನು ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣದ ವಿಚಾರಣೆ ಆರಂಭಿಸಿದ್ದ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ಅನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈಗ ಹೈಕೋರ್ಟ್ ಅರ್ಜಿ ವಜಾ ಮಾಡಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ತಮ್ಮ ವಕೀಲರನ್ನು ಭೇಟಿ ಮಾಡಿ ಕಾನೂನಾತ್ಮಕವಾಗಿ ಮುಂದಿನ ಹೆಜ್ಜೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

Leave a Reply