ಡಿಕೆ ಶಿವಕುಮಾರ್ ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ

ಡಿಜಿಟಲ್ ಕನ್ನಡ ಟೀಮ್:

ಕಳೆದ ನಾಲ್ಕು ದಿನಗಳಿಂದ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದರೂ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ನೋಟು ರದ್ದತಿ ವೇಳೆ ದೆಹಲಿಯ ಫ್ಲಾಟ್ ನಲ್ಲಿ 8.59 ಕೋಟಿ ಹಣ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಶುಕ್ರವಾರದಿಂದಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಆದರೆ, ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪದ ಮೇರೆಗೆ ಅವರನ್ನು ಬಂಧಿಸಿದೆ. ಶೀಘ್ರದಲ್ಲೇ ಅವರನ್ನು ಕೋರ್ಟ್ ನಲ್ಲಿ ಹಾಜರುಪಡಿಸುವ ನಿರೀಕ್ಷೆ ಇದೆ.

ಡಿಕೆ ಶಿವಕುಮಾರ್ ಅವರನ್ನು ದೆಹಲಿಯ ಆರ್ ಎಂಎಲ್ ಆಸ್ಪತ್ರೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಬಳಿಕ ತಿಹಾರ್  ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ ಎಂಬ ವರದಿ ಬಂದಿವೆ.

Leave a Reply