10 ದಿನಗಳ ಕಾಲ ಇಡಿ ವಶಕ್ಕೆ ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್:

ಅಕ್ರಮ ಹಣ ಗಳಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಸೆ.13ರವರೆಗೆ ಜಾರಿ ನಿರ್ದೇಶನಾಲಯ ವಶಕ್ಕೆ ವಿಶೇಷ ನ್ಯಾಯಾಲಯ ನೀಡಿದೆ.

ಮಂಗಳವಾರ ಬಂಧಿತರಾದ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬುಧವಾರ ರೋಸ್ ಅವೆನ್ಯೂ ಕೋರ್ಟ್ ಮುಂದೆ ಹಾಜರು ಪಡಿಸಿದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರ ಪರ ವಕೀಲರಾದ ಮನು ಸಿಂಘ್ವಿ ಅವರು ವಾದ ಮಂಡಿಸಿ, ಡಿಕೆ ಶಿವಕುಮಾರ್ ಅವರ ಬಂಧನವನ್ನು ಆಕ್ಷೇಪಿಸಿದರು. ಅಲ್ಲದೆ ಅವರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು.

ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಪರ ವಕೀಲರು ಡಿಕೆ ಶಿವಕುಮಾರ್ ಅವರ ಸಂಪಾದನೆಗಳ ಮೇಲೆ ಅನುಮಾನವಿದೆ. ಹೀಗಾಗಿ 14 ದಿನಗಳ ಕಾಲ ಡಿಕೆ ಶಿವಕುಮಾರ್ ಅವರನ್ನು ವಶಕ್ಕೆ ನೀಡುವಂತೆ ಮನವಿ ಮಾಡಿದರು.

ವಿಚಾರಣೆಯಲ್ಲಿ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹರ್ ಅವರು ಡಿಕೆ ಶಿವಕುಮಾರ್ ಅವರನ್ನು 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದರು. ಅಲ್ಲದೆ ಡಿಕೆಶಿ ಅವರನ್ನು ಕುಟುಂಬ ಸದಸ್ಯರು ಭೇಟಿ ಮಾಡಲು ಪ್ರತಿದಿನ 30 ನಿಮಿಷ ಕಾಲಾವಕಾಶ ನೀಡಿದರು.

Leave a Reply