ಡಿಕೆಶಿ ಆಯ್ತು, ಈಗ ಅವರ ಪುತ್ರಿ ಮೇಲೆ ಇಡಿ ವಕ್ರದೃಷ್ಟಿ!

ಡಿಜಿಟಲ್ ಕನ್ನಡ ಟೀಮ್:

ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಈಗ ಅವರ ಪುತ್ರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಜಾರಿ ನಿರ್ದೇಶನಾಲಯ ಸೆಪ್ಟೆಂಬರ್ 12ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದರೊಂದಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಕ್ರದೃಷ್ಟಿ ಡಿಕೆಶಿ ಮೇಲೆ ಮಾತ್ರವಲ್ಲದೇ ಅವರ ಪುತ್ರಿ ಮೇಲೂ ಬಿದ್ದಿದೆ.

ಜಾರಿ ನಿರ್ದೇಶನಾಲಯದ ವಿಚಾರಣೆಗೆ ತಡೆ ನೀಡುವಂತೆ ಮನವಿ ಮಾಡಿ ಡಿಕೆ ಶಿವಕುಮಾರ್ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ನಡೆಯಲಿದ್ದು, ಇದಕ್ಕೂ ಮುನ್ನ ಡಿಕೆಶಿ ಪುತ್ರಿಗೆ ಸಮನ್ಸ್ ನೀಡಲಾಗಿದೆ. ಇನ್ನು ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಡಿಕೆ ಶಿವಕುಮಾರ್ ಅವರನ್ನು ಸೆ.13ರ ವರೆಗೆ ಇಡಿ ಅಧಿಕಾರಿಗಳ ವಶಕ್ಕೆ ನೀಡಲಾಗಿದ್ದು, ಈ ಅವಧಿ ಮುಕ್ತಾಯ ಮುನ್ನ ಪುತ್ರಿಯ ವಿಚಾರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

Leave a Reply