ಕೇಂದ್ರದ ಒಕ್ಕಲಿಗ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಡಿಜಿಟಲ್ ಕನ್ನಡ ಟೀಮ್:

ಇಡಿ, ಐಟಿ ಹಾಗೂ ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರ ಒಕ್ಕಲಿಗ ನಾಯಕರನ್ನು ವಿರುದ್ಧ ನಡೆಸುತ್ತಿರುವ ಸೇಡಿನ ರಾಜಕಾರಣವನ್ನು ವಿರೋಧಿಸಿ ಬುಧವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ನಂತರ 15 ಪ್ರತಿನಿಧಿಗಳ ನಿಯೋಗ ಸ್ವಾತಂತ್ರ್ಯ ಉದ್ಯಾನವನದಿಂದ ರಾಜಭವನಕ್ಕೆ ತೆರಳಿ ಕೇಂದ್ರ ಸರ್ಕಾರದ ಒಕ್ಕಲಿಗ ವಿರೋಧ ನೀತಿ ಖಂಡಿಸಿ ಮನವಿ ಸಲ್ಲಿಕೆ ಮಾಡಲಾಗುವುದು.

ಮೇಲಿನ ತೆರಿಗೆ ಇಲಾಖೆಯ ಕಿರುಕುಳದಿಂದ ಸಿದ್ಧಾರ್ಥ ಅವರ ಆತ್ಮಹತ್ಯೆ, ವಿಚಾರಣೆಗೆ ಹಾಜರಾದರೂ ಅನಗತ್ಯವಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬಂಧಿಸಲು ಸಂಚು ಸೇರಿದಂತೆ ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯದ ಪ್ರಮುಖರ ಮೇಲೆ ಕೇಂದ್ರ ಬಿಜೆಪಿ ಸರ್ಕಾರ ನಡೆಯುತ್ತಿರುವ ದ್ವೇಷದ ರಾಜಕಾರಣವನ್ನು ವಿರೋಧಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ.

ಈ ಪ್ರತಿಭಟನೆಯಲ್ಲಿ ಒಕ್ಕಲಿಗ ಸಂಘ ಸಂಸ್ಥೆಗಳು ಹಾಗೂ ವಿವಿಧ ಕನ್ನಡ ಪರ ಸಂಸ್ಥೆಗಳು ಹಾಗೂ ರೈತ ಸಂಘಟನೆಗಳು ಭಾಗವಹಿಸಲಿವೆ.

Leave a Reply