ಒತ್ತಡಕ್ಕೆ ಮಣಿದ ಕೇಂದ್ರ! ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ

ಡಿಜಿಟಲ್ ಕನ್ನಡ ಟೀಮ್:

ಕೇವಲ ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಪರೀಕ್ಷೆ ನಡೆಸುವ ಕೇಂದ್ರದ ನಿರ್ಧಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆ ನಡೆಸುವುದಾಗಿ ಹಣಕಾಸು ಸಚಿವಾಲಯ ತಿಳಿಸಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಚಿವಾಲಯ ‘ಐಬಿಪಿಎಸ್ ಅಧಿಸೂಚನೆಯಂತೆ 16ರಂದು ನಡೆಯಲಿರುವ ಆಫೀಸರ್ 1 ಹಾಗೂ ಸಹಾಯಕ ಆಫೀಸರ್ ಹುದ್ದೆ ಪರೀಕ್ಷೆಯನ್ನು ಇಂಗ್ಲೀಷ್ ಹಾಗೂ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು’ ಎಂದು ತಿಳಿಸಿದೆ.

ಈ ಹಿಂದೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ತಿಳಿಸಿದ್ದರು. ಆದರೆ ಈ ಬಾರಿ ಪರೀಕ್ಷೆ ಕೇವಲ ಹಿಂದಿ ಹಾಗೂ ಇಂಗ್ಲೀಷ್ ನಲ್ಲಿ ಮಾತ್ರ ನಡೆಸಲು ಅಧಿಸೂಚನೆ ಹೊರಡಿಸಿದಾಗ ರಾಜ್ಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

Leave a Reply