ದೋಸ್ತಿಗಳ ಬಾಯಲ್ಲಿ ಶತ್ರುತ್ವದ ಮಾತು! ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಡಿಜಿಟಲ್ ಕನ್ನಡ ಟೀಮ್:

‘ಕಾಂಗ್ರೆಸ್ ನಾಯಕರಿಗೆ ಬಿಜೆಪಿಗಿಂತ ಜೆಡಿಎಸ್ ಮೊದಲ ಶತ್ರು…’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಹುಣಸೂರಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ‘ರಾಜ್ಯ ಕಾಂಗ್ರೆಸ್ ನಾಯಕರ ಪೈಕಿ ಬಹುತೇಕರಿಗೆ ಜೆಡಿಎಸ್ ಮೊದಲ ಶತ್ರು. ನಾನು ರಾಜ್ಯ ನಾಯಕರ ಬಗ್ಗೆ ಮಾತನಾಡುತ್ತಿದ್ದು ದೆಹಲಿ ನಾಯಕರ ಬಗ್ಗೆ ಹೇಳುತ್ತಿಲ್ಲ’ ಎಂದು ಹೇಳಿದ್ದಾರೆ.

ಈ 15 ಕ್ಷೇತ್ರಗಳ ಪೈಕಿ ಜೆಡಿಎಸ್ ನ ಮೂರು ಕ್ಷೇತ್ರಗಳು ಸೇರಿದ್ದು, ಇವು ಜೆಡಿಎಸ್ ಪಾಲಿಗೆ ಪ್ರತಿಷ್ಠೆಯ ಕಣವಾಗಲಿದೆ. ‘ಉಪಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ನಾವು ಈ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕಿದೆ. ನನ್ನ ಹೋರಾಟಕ್ಕೆ ಉತ್ಸಾಹ ತುಂಬಲು ಹುಣಸೂರು ಕ್ಷೇತ್ರದಲ್ಲಿ ಗೆಲವು ಮುಖ್ಯವಾಗಿದೆ. ಹೀಗಾಗಿ ನೀವು ಪಕ್ಷದ ಪರವಾಗಿ ಕೆಲಸ ಮಾಡಬೇಕಿದೆ’ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

Leave a Reply