ಎಐಸಿಸಿಯಿಂದ ರಮ್ಯಾಗೆ ಗೇಟ್ ಪಾಸ್!

ಡಿಜಿಟಲ್ ಕನ್ನಡ ಟೀಮ್:

ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ಸ್ಥಾನದಿಂದ ದಿವ್ಯ ಸ್ಪಂದನಾ ಉರುಫ್ ರಮ್ಯಾ ಅವರಿಗೆ ಗೇಟ್ ಪಾಸ್ ನೀಡಲಾಗಿದೆ.

2013ರಲ್ಲಿ ಮಂಡ್ಯ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಮ್ಯಾ ಆರು ತಿಂಗಳ ಕಾಲ ಸಂಸದೆಯಾಗಿದ್ದರು. ನಂತರ 2014ರ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿದ್ದರು. ನಂತರ ರಾಹುಲ್​ ಗಾಂಧಿ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ರಮ್ಯಾಗೆ ಸಾಮಾಜಿಕ ಜಾಲತಾಣದ ಜವಾಬ್ದಾರಿ ವಹಿಸಲಾಗಿತ್ತು.

ಸಾಮಾಜಿಕ ಜಾಲತಾಣದ ಮುಖ್ಯಸ್ಥರಾದ ಬಳಿಕ ರಮ್ಯಾ ಟ್ವೀಟರ್​ ಫೇಸ್​ಬುಕ್​ನಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದರು. ಪ್ರಧಾನಿ ಮೋದಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರಮಣಕಾರಿಯಾಗಿ ಟೀಕಿಸಿದ್ದರು.​

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೋದಿ ವಿರುದ್ಧ ಟೀಕೆ ಮಾಡಿ ಕಾಂಗ್ರೆಸ್ ಮುಜುಗರಕ್ಕೆ ಒಳಗಾಗುವಂತೆ ಮಾಡಿದ್ದರು. ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸೈಲೆಂಟ್ ಆಗಿದ್ದ ರಮ್ಯಾ ಕಣ್ಮರೆಯಾದರು.

ಈಗ ರಮ್ಯಾ ಅವರ ಜಾಗಕ್ಕೆ ರೋಹನ್ ಗುಪ್ತಾ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

Leave a Reply