ನಿರ್ಮಲಾನಂದ ಶ್ರೀಗಳು ನನ್ನ ನೈತಿಕ ಬಲ! ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿಕೆ ಸ್ಪಷ್ಟನೆ

ಡಿಜಿಟಲ್ ಕನ್ನಡ ಟೀಮ್:

‘ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದ ಸ್ವಾಮಿ ಅವರು ನನ್ನ ನೈತಿಕ ಬಲ. ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಅವರ ಹೆಸರು ಬಳಸಿ ನನ್ನ ವಿರುದ್ಧ ಮಾಡುತ್ತಿರುವ ಆರೋಪ ನೋವು ತಂದಿದೆ’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಶೀಗಳ ಫೋನ್ ನಂಬರ್ ಅನ್ನು ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ ಟ್ಯಾಪ್ ಮಾಡಲಾಗಿತ್ತು ಎಂಬ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಅಲ್ಲದೆ ಈ ವಿಚಾರವಾಗಿ ಬಿಜೆಪಿ ನಾಯಕರುಗಳು ಅದರಲ್ಲೂ ಸಚಿವ ಆರ್ ಅಶೋಕ್ ಟೀಕಾ ಪ್ರಹಾರ ನಡೆಸಿದ್ದರು. ಹೀಗಾಗಿ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು ಹೇಳಿರುವುದಿಷ್ಟು…

‘ನನ್ನ ಅಧಿಕಾರಾವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌.

ನನ್ನ ಅಧಿಕಾರಾವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌. ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ.’

Leave a Reply