ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ! ಉಪಚುನಾವಣೆಯೇ ಟಾರ್ಗೆಟ್!

ಡಿಜಿಟಲ್ ಕನ್ನಡ ಟೀಮ್:

ಕಾಂಗ್ರೆಸ್ ಪಕ್ಷದಲ್ಲಿ ಮೂಲ ವರ್ಸಸ್ ವಲಸೆ ನಾಯಕರ ನಡುವಣ ತಿಕ್ಕಾಟ ಜೋರಾಗಿದ್ದರೂ ಉಪಚುನಾವಣೆ ಗಮನದಲ್ಲಿ ಇಟ್ಟುಕೊಂಡು ಹೈಕಮಾಂಡ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ. ಇನ್ನು ಎಸ್.ಆರ್ ಪಾಟೀಲ್ ಅವರು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಆಗಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರು ಸಿದ್ದರಾಮಯ್ಯ ಅವರಿಂದ ನಮ್ಮನ್ನು ಮೂಲೆಗುಂಪು ಮಾಡಲಾಗಿದೆ. ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪ ಮಾಡಿದ್ದರು. ರಾಜ್ಯ ಕಾಂಗ್ರೆಸ್ ನಲ್ಲಿ ಉದ್ಭವಸಿರೋ ಬಿಕ್ಕಟ್ಟನ್ನು ಬಗೆಹರಿಸಲು ಹೈಕಮಾಂಡ್ ಮಧುಸೂಧನ್ ಮಿಸ್ತ್ರಿ ಅವರನ್ನು ರಾಜ್ಯಕ್ಕೆ ಕಳುಹಿಸಲಾಗಿತ್ತು. ಅವರಿಂದ ವರದಿ ಪಡೆದ ಅಧ್ಯಕ್ಷೆ ಸೋನಿಯಾ ಗಾಂಧಿ, ಹೆಚ್.ಕೆ ಪಾಟೀಲ್ ಬದಲು ಸಿದ್ದರಾಮಯ್ಯ ಅವರನ್ನೇ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಇನ್ನು ಮೈತ್ರಿ ಸರ್ಕಾರ ಬೀಳಿಸಲು ರಾಜೀನಾಮೆ ಕೊಟ್ಟ 17 ಶಾಸಕರ ಕ್ಷೇತಗಳಲ್ಲಿ ಎದುರಾಗಳಿರುವ ಉಪ ಚುನಾವಣೆ ಸಂಪೂರ್ಣ ಜವಾಬ್ದಾರಿಯನ್ನು ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ನೀಡಿದೆ. ಅದರೊಂದಿಗೆ ಪಕ್ಷದಲ್ಲಿ ತಮ್ಮ ನಿಯಂತ್ರಣ ಉಳಿಸಿಕೊಳ್ಳಬೇಕಾದರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಕ್ಷೇತ್ರಗಳ ಗೆಲುವು ಅನಿವಾರ್ಯವಾಗಿದೆ.

Leave a Reply