ವಿಶ್ವಸಂಸ್ಥೆ ಸಭೆಯಲ್ಲಿ ಪಾಕ್ ತರಾಟೆ ತೆಗೆದುಕೊಂಡ ತರೂರ್!

ಡಿಜಿಟಲ್ ಕನ್ನಡ ಟೀಮ್:

ವಿಶ್ವಸಂಸ್ಥೆ ಸಭೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಶ್ಮೀರ ವಿಚಾರವಾಗಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸೆರ್ಬಿಯಾದಲ್ಲಿ ನಡೆದ ವಿಶ್ವಸಂಸ್ಥೆ ವ್ಯಾವಹಾರಿಕ ಸಭೆಯಲ್ಲಿ ಭಾರತದ ಸಂಸತ್ತಿನ ನಿಯೋಗದ ಪರವಾಗಿ ಪಾಲ್ಗೊಂಡು ಮಾತನಾಡಿದ ಶಶಿ ತರೂರ್, ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಹೇಳುತ್ತಿರುವ ಸುಳ್ಳನ್ನು ಜಗಜ್ಜಾಹಿರು ಮಾಡಿದ್ದಾರೆ. ಅಲ್ಲದೆ ಪಾಕಿಸ್ತಾನದ ಭಯೋತ್ಪಾದನೆ ಪ್ರಾಯೋಜಕತ್ವವನ್ನು ಬಯಲಿಗೆಳೆದು ಪಾಕಿಸ್ತಾನ ಮಾನ ಹರಾಜು ಹಾಕಿದ್ದಾರೆ.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಆದರೆ ಪಾಕಿಸ್ತಾನ ಕಾಶ್ಮೀರ ವಿಚಾರದಲ್ಲಿ ಸುಳ್ಳು ಹೇಳಿ ರಾಜಕೀಯ ಲಾಭ ಪಡೆಯಲು ಜಾಗತಿಕ ವೇದಿಕೆಯನ್ನು ಇಸ್ಲಾಮಾಬಾದ್ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಇದು ಸರಿಯಲ್ಲ. ವಿಶ್ವಸಂಸ್ಥೆ ಉಗ್ರರಪಟ್ಟಿಯಲ್ಲಿ ಸೇರಿಸಿದ ಭಯೋತ್ಪಾದಕರಿಗೂ ಪಿಂಚಣಿ ನೀಡುತ್ತಿರುವ ದೇಶ ಅಂದರೆ ಅದು ಪಾಕಿಸ್ತಾನ ಮಾತ್ರ ಎಂದು ತಿಳಿಸಿದರು.

Leave a Reply