ರಾಜ್ಯದ ಮೊದಲ ಲೋಕಾಯುಕ್ತ ನ್ಯಾ.ಎನ್ ವೆಂಕಟಾಚಲ ವಿಧಿವಶ

ಡಿಜಿಟಲ್ ಕನ್ನಡ ಟೀಮ್:

ಕರ್ನಾಟಕದ ಮೊದಲ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿ ಭ್ರಷ್ಟರ ಪಾಲಿನ ಸಿಂಹಸ್ವಪ್ನರಾಗಿದ್ದ ಎನ್.ವೆಂಕಟಾಚಲ (90) ಅವರು ಬುಧವಾರ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ನ್ಯಾ.ಎನ್. ವೆಂಕಟಾಚಲ ಅವರು ಇಂದು ಬೆಳಗ್ಗೆ ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದ ನಂಜೇಗೌಡ ವೆಂಕಟಾಚಲ ಅವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು.

ಕರ್ನಾಟಕದ ಮೊದಲ ಲೋಕಾಯುಕ್ತರಾಗಿದ್ದ ವೆಂಕಟಾಚಲ ಅವರು ಲೋಕಾಯುಕ್ತರಾಗಿ ಆಯ್ಕೆಯಾಗಿ ಅತ್ಯುತ್ತಮ ಕೆಲಸ ಮಾಡಿ ಮನೆ ಮಾತಾಗಿದ್ದರು. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಆಗಿದ್ದರು.

Leave a Reply