ಕೆಪಿಎಲ್ ಫಿಕ್ಸಿಂಗ್: ಕರ್ನಾಟಕ ರಣಜಿ ಆಟಗಾರರ ಬಂಧನ!

ಡಿಜಿಟಲ್ ಕನ್ನಡ ಟೀಮ್:

ಕರ್ನಾಟಕ ಪ್ರೀಮಿಯರ್ ಲೀಗ್ ಟಿ20 ಟೂರ್ನಿಯಲ್ಲಿ ಫಿಕ್ಸಿಂಗ್ ನಲ್ಲಿ ಭಾಗಿಯಾದ ಆರೋಪದ ಮೇಲೆ ಕರ್ನಾಟಕ ರಣಜಿ ಆಟಗಾರರಾದ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಟೂರ್ನಿಯಲ್ಲಿ ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಗೌತಮ್ ಹಾಗೂ ಆಟಗಾರ ಖಾಜಿ ಅವರು ಆಗಸ್ಟ್ 31ರಂದು ನಡೆದ ಹುಬ್ಬಳ್ಳಿ ಟೈಗರ್ಸ್ ವಿರುದ್ಧದ ಪಂದ್ಯದಲ್ಲಿ ಮಂದಗತಿ ಬ್ಯಾಟಿಂಗ್ ಮಾಡಲು 20 ಲಕ್ಷ ಹಣ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ.

ಸಿಎಂ ಗೌತಮ್ ಭಾರತ ಎ ತಂಡ ಹಾಗೂ 3 ಆವೃತ್ತಿಯ ಐಪಿಎಲ್ ನಲ್ಲಿ ಮುಂಬೈ ಹಾಗೂ ಬೆಂಗಳೂರು ತಂಡದ ಪರ ಆಡಿದ್ದಾರೆ. ಇನ್ನು ಖಾಜಿ ಕರ್ನಾಟಕ ರಣಜಿ ತಂಡದಲ್ಲಿ ಆಡಿದ್ದಾರೆ.

Leave a Reply