ಹಲವು ಪ್ರಹಸನಗಳ ನಂತರ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ!

ಡಿಜಿಟಲ್ ಕನ್ನಡ ಟೀಮ್:

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಆತಂತ್ರವಾದ ನಂತರ ಯಾವುದೇ ಪಕ್ಷಗಳು ಸರ್ಕಾರ ರಚಿಸಲು ವಿಫಲವಾದ ಕಾರಣ ರಾಷ್ಟ್ರಪತಿ ಆಳ್ವಿಕೆಗೆ ತೀರ್ಮಾನಿಸಲಾಗಿದೆ.

ಬಿಜೆಪಿ, ಶಿವಸೇನಾ ಹಾಗೂ ಎನ್ ಸಿಪಿಗೆ ಸರ್ಕಾರ ರಚಿಸಲು ರಾಜ್ಯಪಾಲ ಭಗತ್‍ಸಿಂಗ್ ಕೋಶಿಯಾರಿ ಅವರು ಆಹ್ವಾನ ನೀಡಿದರು. ಆದರೆ ಯಾರೂ ಸರ್ಕಾರ ರಚಿಸದ ಕಾರಣ ಮಂಗಳವಾರ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದರು.

ಶಿಫಾರಸು ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ರಾಷ್ಟ್ರಪತಿ ಆಳ್ವಿಕೆಗೆ ಒಪ್ಪಿಗೆ ನೀಡಿದೆ.

Leave a Reply